ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಕ್ಷೇತ್ರಗಳಿಂದ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಇಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ನೀತಿ ಸಂಹಿತೆ ಪ್ರಕಾರ ಯಾವುದೇ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಅಥವಾ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಬಾರದೆಂದು ಮತ್ತು ಇನ್ನಿತರ ಅಭಿವೃದ್ಧಿ ಕೆಲಸಗಳ ಬಗ್ಗೆ ಘೋಷಣೆ ಇತ್ಯಾದಿ ಮಾಡಬಾರದೆಂದು ಚುನಾವಣಾ ಆಯೋಗದಿಂದ ಸ್ಪಷ್ಟವಾದ ನಿದರ್ಶನ ಇರುತ್ತದೆ.
ಆದರೆ ಡಿ.23 ರಂದು ಪೂರ್ವಾಹ್ನ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಮೊಹಿದ್ದಿನ್ ಬಾವರವರು ಬೈಕಂಪಾಡಿ ಮೇಲ್ಸೇತುವೆಯನ್ನು ಮಹಾನಗರಪಾಲಿಕೆಯ ಉಪಮೇಯರ್ರಾದ ಪುರುಷೋತ್ತಮ ಚಿತ್ರಾಪುರರವರ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಉದ್ಘಾಟನೆ ಮಾಡಿರುತ್ತಾರೆಂದು ಎಲ್ಲಾ ಮಾಧ್ಯಮಗಳಲ್ಲಿ, ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.
ಶಾಸಕ ಮೊಹಿದ್ದಿನ್ ಬಾವರವರು ಓರ್ವ ಜವಾಬ್ದಾರಿಯುತ ಶಾಸಕರಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅದನ್ನು ಲೆಕ್ಕಿಸದೆ ಬೈಕಂಪಾಡಿ ಮೇಲ್ಸೇತುವೆಯನ್ನು ಉದ್ಘಾಟಿಸುವ ಮೂಲಕ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯನ್ನು ಮಾಡಿರುತ್ತಾರೆ. ಆದ್ದರಿಂದ ಶಾಸಕರಾದ ಮೊಹಿದ್ದಿನ್ ಬಾವರವರು ಹಾಗೂ ಮ.ನ.ಪಾ ಉಪಮೇಯರ್ ಪುರುಷೋತ್ತಮ ಚಿತ್ರಾಪುರರವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಕೆ.ಮೋನಪ್ಪ ಭಂಡಾರಿ ಚುನಾವಣಾ ಅಧಿಕಾರಿಗಳಿಗೆ ಅಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.