ಬೆಳ್ತಂಗಡಿ : ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಡಿ. 30 ರಂದು ಸುವರ್ಣ ಆರ್ಕೇಡ್ನಲ್ಲಿ ಶಾಸಕ ಕೆ. ವಸಂತ ಬಂಗೇರ ನೆರವೇರಿಸಲಿದ್ದಾರೆ. ಸುದ್ದಿ ಸಮೂಹ ಸಂಸ್ಥೆ ಆಡಳಿತ ನಿರ್ದೇಶಕ ಡಾ| ಯು.ಪಿ.ಶಿವಾನಂದ ಅಧ್ಯಕ್ಷೆ ವಹಿಸಲಿದ್ದಾರೆ.
ಅತಿಥಿಗಳಾಗಿ ನ.ಪಂ.ಅಧ್ಯಕ್ಷೆ ನಳಿನಿ ವಿಶ್ವನಾಥ, ಉಜಿರೆ ಬೆನಕ ಹೆಲ್ತ ಸೆಂಟರ್ ಆಡಳಿತ ನಿರ್ದೇಶಕ ಡಾ|ಗೋಪಾಲಕೃಷ್ಣ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ವಿ.ಭಟ್, ಲಯನ್ಸ್ ಕ್ಲಬ್ ಅಧ್ಯಕ್ಷ ರಾಜು ಶೆಟ್ಟಿ, ಉದ್ಯಮಿ ನಾಣ್ಯಪ್ಪ ಪೂಜಾರಿ, ಜೇಸಿಐ ಮಂಜುಶ್ರೀ ಅಧ್ಯಕ್ಷ ವಸಂತ ಶೆಟ್ಟಿ ಅತಿಥಿಗಳಾಗಿರುತ್ತಾರೆ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ| ಆನಂದ್ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.