ನವದೆಹಲಿ: ಉದ್ಯೋಗ ನೀಡುವವರನ್ನು ಸೃಷ್ಟಿಸುವುದರತ್ತ ಸರ್ಕಾರದ ಚಿತ್ತವೇ ಹೊರತು ಉದ್ಯೋಗ ಬಯಸುವವರತ್ತ ಅಲ್ಲ. ದಲಿತ ಉದ್ಯಮಿಗಳಿಗೆ ಒಳಿತು ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳವಾರ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ದಲಿತ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀ ಆಯೋಜಿಸಿದ್ದ ದಲಿತ ಉದ್ಯಮಿಗಳ ಕಾನ್ಫರೆನ್ಸ್ನ್ನು ಉದ್ಘಾಟಿಸಿ ಮಾತನಾಡಿದರು. ಇದೇ ವೇಳೆ ಐವರು ದಲಿತ ಉದ್ಯಮಿಗಳಿಗೆ ಪುರಸ್ಕಾರವನ್ನು ನೀಡಿ ಗೌರವಿಸಿದರು.
ದಲಿತ ಉದ್ಯಮಿಗಳು ಕೇವಲ ತಮ್ಮ ಹಕ್ಕಿನ ಬಗ್ಗೆ ಮಾತನಾಡಿಲ್ಲ, ಅವರು ತಮ್ಮ ಕರ್ತವ್ಯವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲ, ಅವರು ಶ್ರೇಷ್ಠ ಆರ್ಥಿಕ ತಜ್ಞರೂ ಆಗಿದ್ದರು. ಇಂದು ಇಲ್ಲಿ ನೆರೆದಿರುವ ಯಶಸ್ವಿ ಉದ್ಯಮಿಗಳು ಎಲ್ಲಾ ದಲಿತರಿಗೂ ಸ್ಫೂರ್ತಿ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.