ರಾಮೇಶ್ವರಂ: ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ 29 ಮೀನುಗಾರರನ್ನು ಗುರುವಾರ ಲಂಕಾ ಪಡೆಗಳು ತ್ರಿಂಕೊಮಲ್ಲೀ ಕರಾವಳಿ ಪ್ರದೇಶದಲ್ಲಿ ಬಂಧಿಸಿವೆ.
ಅಷ್ಟೇ ಅಲ್ಲದೇ ಇವರ ಮೂರು ಬೋಟುಗಳನ್ನೂ ತೆಗೆದುಕೊಂಡು ಹೋಗಿದೆ ಮತ್ತು ಮೀನಿನ ಬಲೆಗಳನ್ನು ಕತ್ತರಿಸಿ ಹಾಕಿದೆ. ಈ ಬಗ್ಗೆ ಮೀನುಗಾರಿಕಾ ಇಲಾಖೆಗೆ ಮಾಹಿತಿಯನ್ನೂ ನೀಡಲಾಗಿದೆ.
ತಮಿಳುನಾಡು ಕರಾವಳಿ ತೀರದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಈ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾಣಿಗೆ ಪತ್ರ ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.