ಬೆಳ್ತಂಗಡಿ: ವೈದ್ಯರು ಹಾಗೂ ವಕೀಲರು ತಮ್ಮ ವೃತ್ತಿ ಧರ್ಮವನ್ನು ಉಳಿಸಿಕೊಂಡು, ಸಮಾಜದಲ್ಲಿ ಗೌರವದ ಸೇವೆ ಸಲ್ಲಿಸಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಅವರು ಬುಧವಾರ ಸುವರ್ಣ ಆರ್ಕೇಡ್ನಲ್ಲಿ ಸುದ್ದಿ ಮಾಹಿತಿ ಪ್ರಾಯೋಜಕತ್ವದಲ್ಲಿ ಕೆ.ಎಂ.ಸಿ. ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಕೆ.ಎಂ.ಸಿ. ಆಸ್ಪತ್ರೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಗ್ರಾಮೀಣ ಜನರತ್ತ ಆಸ್ಪತ್ರೆಯ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಸುದ್ದಿ ಮಾಹಿತಿ ಕೇಂದ್ರದಲ್ಲಿ ಮಾಹಿತಿ ಕಚೇರಿಯನ್ನು ಆರಂಭಿಸಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಜನರು ಈ ಕೇಂದ್ರದ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಅವರು ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ಅರ್ಜಿ ಸಲ್ಲಿಸುವ ಬಡವರಿಗೆ ಮೂಲ ರಶೀದಿಗಳು ಸಿಗದೆ ಇರುವುದರಿಂದ ತುಂಬಾ ಅನಾನುಕೂಲವಾಗುತ್ತಿದೆ. ಹೀಗಾಗಿ ಆಸ್ಪತ್ರೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಸುದ್ದಿ ಸಮೂಹ ಸಂಸ್ಥೆ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದ ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ನ.ಪಂ.ಅಧ್ಯಕ್ಷೆ ನಳಿನಿ ವಿಶ್ವನಾಥ್, ನಿವೃತ್ತ ಎಸ್.ಪಿ. ಪೀತಾಂಬರ ಹೆರಾಜೆ, ವಕೀಲರ ಸಂಘ ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಬೆನಕ ಹೆಲ್ತ ಸೆಂಟರ್ ಆಡಳಿತ ನಿರ್ದೇಶಕ ಡಾ| ಗೋಪಾಲಕೃಷ್ಣ, ರೋಟರಿ ಕ್ಲಬ್ ಅಧ್ಯಕ್ಷ ಎಂ.ವಿ.ಭಟ್, ಲಯನ್ಸ್ ಕ್ಲಬ್ ಅಧ್ಯಕ್ಷ ರಾಜು ಶೆಟ್ಟಿ, ಮಂಜುಶ್ರೀ ಅಧ್ಯಕ್ಷ ವಸಂತ ಶೆಟ್ಟಿ ಉಪಸ್ಥಿತರಿದ್ದರು.
ಪತ್ರಕರ್ತ ಅಶ್ರಫ್ ಆಲಿ ಕುಂಞಿ ಕಾರ್ಯಕ್ರಮ ನಿರ್ವಹಿಸಿದರು. ಹೆರಾಲ್ಡ್ ಪಿಂಟೋ ಸ್ವಾಗತಿಸಿದರು. ಕೆ.ಎಂ.ಸಿ. ಆಸ್ಪತ್ರೆ ವೈದ್ಯಕೀಯ ಅಧ್ಯಕ್ಷ ಡಾ| ಆನಂದ್ ವೇಣುಗೋಪಾಲ್ ಪ್ರಸ್ತಾವಿಸಿದರು. ಸುದ್ದಿ ಬಿಡುಗಡೆ ಪ್ರಬಂಧಕ ಮಂಜುನಾಥ ರೈ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.