ನವದೆಹಲಿ: 50 ಸಾವಿರ ರೂಪಾಯಿಗಳಿಗಿಂತ ಹೆಚ್ಚಿನ ವಹಿವಾಟು ನಡೆಸಲು ಶುಕ್ರವಾರದಿಂದ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ.
50 ಸಾವಿರಕ್ಕಿಂತ ಹೆಚ್ಚಿನ ಹೋಟೆಲ್ ಅಥವಾ ರೆಸ್ಟೋರೆಂಟ್ ಬಿಲ್ ಪಾವತಿಸುವ ವೇಳೆ, ವಿದೇಶಿ ಪ್ರಯಾಣ, 2 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಚಿನ್ನಾಭರಣ ಖರೀದಿಸಲು, 10 ಲಕ್ಷ ಮೌಲ್ಯದ ಸ್ಥಿರ ಆಸ್ತಿ ಖರೀದಿಗೆ ಪ್ಯಾನ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ.
50 ಸಾವಿರಕ್ಕಿಂತಲೂ ಹೆಚ್ಚಿನ ಡೆಪೋಸಿಟ್ ಮಾಡಲು ಅಥವಾ ಒಂದು ವರ್ಷದಲ್ಲಿ ಬ್ಯಾಂಕ್, ಪೋಸ್ಟ್ ಆಫೀಸ್ ಅಥವಾ ಎನ್ಬಿಎಫ್ಸಿಗಳಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಜಮೆ ಮಾಡಲು ಪ್ಯಾನ್ ಕಡ್ಡಾಯವಾಗಿದೆ.
ದೇಶೀಯ ಕಪ್ಪುಹಣವನ್ನು ತಡೆಯುವ ಸಲುವಾಗಿ ಈ ನಿಯಮವನ್ನು ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.