ಸೆಔಲ್: ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸಿದ ಉತ್ತರ ಕೊರಿಯಾದ ಭೂಭಾಗದಲ್ಲಿ 5.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾಂಬ್ ಟೆಸ್ಟ್ ಮಾಡಿದ ಪುಂಗ್ಗೆ ಪ್ರದೇಶದ ಸಮೀಪವಿರುವ ಕಿಲ್ಜು ನಗರದಲ್ಲಿ ಭೂಕಂಪನದ ಕೇಂದ್ರ ಬಿಂದುವಿದೆ ಎಂದು ತಜ್ಞರು ತಿಳಿಸಿದ್ದಾರೆ.
ಈ ಭೂಕಂಪ ಮಾನವ ನಿರ್ಮಿತವಾದುದ್ದು ಎಂಬುದನ್ನು ದಕ್ಷಿಣಕೊರಿಯಾ ಸ್ಪಷ್ಟಪಡಿಸಿದೆ.
ಯುರೋಪಿಯನ್ ಮೆಡಿಟರೇನಿಯನ್ ಸೆಸ್ಮೋಲೋಜಿಕಲ್ ಸೆಂಟರ್ ಉತ್ತರ ಕೊರಿಯಾದಲ್ಲಿ ಅಸ್ವಾಭಾವಿಕ ಭೂಕಂಪನದ ಚಟುವಟಿಕೆಗಳು ನಡೆಯುತ್ತಿದೆ ಎಂಬುದನ್ನು ಪತ್ತೆಹಚ್ಚಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.