ಬೆಂಗಳೂರು: ಹುಲಿಗಳ ಸಂಖ್ಯೆಯನ್ನು ಗಮನಿಸಿದರೆ ಕರ್ನಾಟಕ ರಾಜ್ಯ ದೇಶದಲ್ಲೇ ನಂ.1 ಸ್ಥಾನ ಹೊಂದಿದೆ. ಇಲ್ಲಿನ ಸಮೃದ್ಧ ಕಾಡುಗಳು 406 ಕ್ಕೂ ಅಧಿಕ ಹುಲಿಗಳಿಗೆ ಆಶ್ರಯ ತಾಣವಾಗಿದೆ ಎಂದು 2014ರ ರಾಷ್ಟ್ರೀಯ ಹುಲಿ ಗಣತಿಯ ವರದಿ ಪ್ರಕಟಿಸಿದೆ.
ಭಾರತೀಯ ವನ್ಯಜೀವಿ ಸಂಸ್ಥೆ ಬಿಡುಗಡೆಗೊಳಿಸಿದ ವರದಿ ಪ್ರಕಾರ ಮಲೆ ಮಹದೇಶ್ವರ (ಮಹದೇಶ್ವರ ಬೆಟ್ಟ) ವನ್ಯಜೀವಿ ಧಾಮ ಹಾಗೂ ಕಾವೇರಿ ವನ್ಯಜೀವಿ ಧಾಮ ಪ್ರದೇಶಗಳಲ್ಲಿ ಈ ಹುಲಿಗಳನ್ನು ಸಂರಕ್ಷಿಸಲಾಗಿದೆ ಎಂದು ತಿಳಿಸಿದೆ. ಈ ಎರಡು ರಕ್ಷಿತ ಪ್ರದೇಶಗಳಲ್ಲಿ ವೈಜ್ಞಾನಿಕ ವಿಶ್ಲೇಷಣೆ ನಡೆಸಲಾಗಿದ್ದು, ಮಹದೇಶ್ವರ ಬೆಟ್ಟದಲ್ಲಿ 12 ಹಾಗೂ ಕಾವೇರಿಯಲ್ಲಿ 2 ಹುಲಿಗಳು ಪತ್ತೆಯಾಗಿವೆ. ಮುಂದಿನ 5 ವರ್ಷಗಳಲ್ಲಿ ಅವುಗಳ ಸಂಖ್ಯೆ ದುಪ್ಪಟ್ಟು ಆಗಲಿದೆ ಎಂದು ವನ್ಯಜೀವಿ ಜೀವಶಾಸ್ತ್ರಜ್ಞ ಸಂಜಯ್ ಗುಬ್ಬಿ ಹೇಳಿದ್ದಾರೆ.
ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸಂಗಮವಾದ ಈ ಎರಡು ರಕ್ಷಿತ ಪ್ರದೇಶಗಳಲ್ಲಿ ‘ಪ್ರಾಜೆಕ್ಟ್ ಟೈಗರ್’ ಉಪಕ್ರಮದ ಅಡಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ನಿಧಿ ಸಂಗ್ರಹ ಮತ್ತು ಅಧಿಕ ವ್ಯಾಪ್ತಿಯಲ್ಲಿ ರಕ್ಷಣೆ ಒದಗಿಸಲಿವೆ ಎಂದು ನಿರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.