ಉಡುಪಿ: ಉಡುಪಿ ನಗರದಲ್ಲಿರುವ ಉಡುಪಿ ಶ್ರೀ ಕೃಷ್ಣ ಮಠದಲ್ಲಿ 2 ವರ್ಷಗಳಿಗೊಮ್ಮೆ ಜರುಗುವ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಜನವರಿ 17 ರಂದು ಬೆಳಗ್ಗೆ 9 ಗಂಟೆಯಿಂದ ಜನವರಿ 18ರ ಬೆಳಗ್ಗೆ 8 ಗಂಟೆಯವರೆಗೆ ಉಡುಪಿ ನಗರಕ್ಕೆ ಬರುವ ಹಾಗೂ ಉಡುಪಿ ನಗರದಿಂದ ಹೊರಹೋಗುವ ವಾಹನಗಳಿಗೆ ಸಂಚಾರದ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಈ ಕೆಳಗಿನಂತೆ ಆದೇಶ ಹೊರಡಿಸಿದೆ.
ಮಂಗಳೂರು-ಬಲಾಯಿಪಾದೆ-ಅಂಬಲ್ಪಾಡಿ ಕಡೆಯಿಂದ ಉಡುಪಿ ನಗರಕ್ಕೆ ಬರುವ ಎಲ್ಲಾ ವಾಹನಗಳು ಅಂಬಲಪಾಡಿ ಮುಖೇನ ರಾಷ್ಟ್ರೀಯ ಹೆದ್ದಾರಿ -17 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವುದು.
ಉಡುಪಿ ನಗರದ ಸರ್ವೀಸ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಹೊರ ಹೋಗುವ ಎಲ್ಲಾ ವಾಹನಗಳು ಬನ್ನಂಜೆ ಮಾರ್ಗವಾಗಿ ಕರಾವಳಿ ಜಂಕ್ಷನ್ ನಿಂದ ಮಂಗಳೂರು , ಮಲ್ಪೆ ಮತ್ತು ಕುಂದಾಪುರ ಕಡೆಗೆ ಸಂಚರಿಸುವುದು.
ಉಡುಪಿ ನಗರದಿಂದ ಕಾರ್ಕಳಕ್ಕೆ ಹೋಗಿ ಬರುವಂತಹ ಬಸ್ಸುಗಳು ಮಣಿಪಾಲದಲ್ಲಿಯೇ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು. ಈ ದಿನಗಳಂದು ಯಾವುದೇ ಕಾರಣಕ್ಕೂ ಉಡುಪಿ ನಗರದೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಮಲ್ಪೆ, ಸಂತೆಕಟ್ಟೆ, ಬ್ರಹ್ಮಾವರ ಮತ್ತು ಕುಂದಾಪುರ ಕಡೆಯಿಂದ ಉಡುಪಿ ನಗರಕ್ಕೆ ಬರುವ ಸರ್ವೀಸ್ ಹಾಗೂ ಸಿಟಿ ಬಸ್ಸುಗಳು ರಾ.ಹೆ-17 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ ಮತ್ತು ಸರ್ವೀಸ್ ಬಸ್ ನಿಲ್ದಾಣ ಪ್ರವೇಶಿಸುವುದು.
ಮಂಗಳೂರಿನಿಂದ ಮುಂಬೈಗೆ ಹೋಗುವ ಎಲ್ಲಾ ಬಸ್ಸುಗಳು ಬಲಾಯಿಪಾದೆ- ಅಂಬಲ್ಪಾಡಿ-ಕರಾವಳಿ ಜಂಕ್ಷನ್ ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ನೇರವಾಗಿ ಸಂತೆಕಟ್ಟೆ ಮಾರ್ಗವಾಗಿ ಮುಂಬೈ ಕಡೆಗೆ ತೆರಳುವುದು.
ಉಡುಪಿ ನಗರದಲ್ಲಿ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿರುವ ಸ್ಥಳಗಳು:
ಉಡುಪಿ ನಗರದ ಸ್ವಾಗತ ಗೋಪುರ, ಕಿನ್ನಿಮುಲ್ಕಿ, ಗೋವಿಂದ ಕಲ್ಯಾಣ ಮಂಟಪ, ಜೋಡುಕಟ್ಟೆ, ಲಯನ್ಸ್ ಸರ್ಕಲ್, ಡಯಾನ ಜಂಕ್ಷನ್, ಮಿತ್ರಾ ಜಂಕ್ಷನ್, ಐಡಿಯಲ್ ಜಂಕ್ಷನ್, ಕೋರ್ಟ್ ರಸ್ತೆ, ತೆಂಕುಪೇಟೆ ರಸ್ತೆ, ಕೆ.ಎಂ ಮಾರ್ಗ, ಹನುಮಾನ್ ಸರ್ಕಲ್,ಸಂಸ್ಕೃತ ಕಾಲೇಜು ಜಂಕ್ಷನ್, ಕನಕದಾಸ ರಸ್ತೆ, ಬಡಗುಪೇಟೆ ರಸ್ತೆ, ಚಿತ್ತರಂಜನ್ ಸರ್ಕಲ್, ಮಿತ್ರ ಆಸ್ಪತ್ರೆ ರಸ್ತೆ, ಎಲ್.ವಿ.ಟಿ. ತೆಂಕು ಪೇಟೆ ದೇವಸ್ಥಾನದ ರಸ್ತೆ, ಹರಿಶ್ಚಂದ್ರ ಮಾರ್ಗದಿಂದ ವಿದ್ಯೋದಯ ಶಾಲೆಯವರೆಗೆ, ಕಲ್ಸಂಕದಿಂದ ರಾಜಾಂಗಣ ಪಾರ್ಕಿಂಗ್ ಸ್ಥಳದವರೆಗೆ, ಕಟ್ಟೆ ಆಚಾರ್ಯ ಮಾರ್ಗ ಹಾಗೂ ರಥಬೀದಿಗಳಲ್ಲಿ ಯಾವುದೇ ವಾಹನ ಪ್ರವೇಶ ಮತ್ತು ಪಾರ್ಕಿಂಗ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ವಾಹನಗಳ ಪಾರ್ಕಿಂಗ್ ಬಗ್ಗೆ ಬದಲಿ ವ್ಯವಸ್ಥೆ ಮಾಡಿರುವ ಸ್ಥಳಗಳು :
ಸರ್ವೀಸ್ ಬಸ್ ನಿಲ್ದಾಣದ ಬಳಿ (ಬೋರ್ಡ್ ಹೈಸ್ಕೂಲ್ ಆವರಣ)
ಎಂ.ಜಿ.ಎಂ ಕಾಲೇಜು ಮೈದಾನ
ಪಿ.ಪಿ.ಸಿ. ಕಾಲೇಜು ಆವರಣ
ಕ್ರಿಶ್ಚಿಯನ್ ಹೈಸ್ಕೂಲ್ ಆವರಣ
ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು ಆವರಣದ ಎಡಭಾಗ
ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜರಕಾಡು
ಸೈಂಟ್ ಸಿಸಿಲೀಸ್ ಸ್ಕೂಲ್ ಮೈದಾನ ಅಜ್ಜರಕಾಡು
ಯು.ಬಿ.ಎಂ.ಸಿ ಹಿರಿಯ ಪ್ರಾಥಮಿಕ ಶಾಲೆ ಆವರಣ
ಜೆ.ಟಿ.ಎಸ್ ಶಾಲಾ ಮೈದಾನ ಉಡುಪಿ
ಸರಕಾರಿ ಸಂಯುಕ್ತ ಪ್ರೌಢಶಾಲೆ ಮೈದಾನ (ಅಜ್ಜರಕಾಡು (ಜಿಲ್ಲಾ ನ್ಯಾಯಾಧೀಶರ ಮನೆಯ ಮುಂಭಾಗ)
ಬಯಲು ರಂಗಮಂದಿರ, ಬೀಡಿನಗುಡ್ಡೆ ಉಡುಪಿ
ನಾರ್ತ್ ಸ್ಕೂಲ್ ಆವರಣ, ಕಾರ್ಪೋರೇಶನ್ ಬ್ಯಾಂಕ್ ಎದುರು
ಆದಿಉಡುಪಿ ಹೈಯರಿ ಪ್ರೈಮರಿ ಸ್ಕೂಲ್ ಆದಿಉಡುಪಿ
ಒಳಕಾಡು ಶಾಲೆ ಆವರಣ
ರಾಯಲ್ ಗಾರ್ಡನ್ ಆವರಣ
ಅನಂತೇಶ್ವರ ಆಂಗ್ಲ ಮಾಧ್ಯಮ ಶಾಲೆ ಆವರಣ
ಅಲ್ಲದೇ ಜನವರಿ 6 ರಿಂದ ಜನವರಿ 31ರ ವರೆಗೆ ಪೇಜಾವರ ಮಠದ ಹಿಂಭಾಗದಲ್ಲಿ ನಗರಸಭೆ ವತಿಯಿಂದ ದ್ವಿಚಕ್ರ ವಾಹನಗಳಿಗೆ ಪೇ-ಟು-ಪಾರ್ಕಿಂಗ್ ನಿಲುಗಡೆ ಮಾಡುತ್ತಿದ್ದು ವುಡ್ಲ್ಯಾಂಡ್ ಹೋಟೆಲ್ನಿಂದ ಪೇಜಾವರ ಮಠದ ಹಿಂಭಾಗದವರೆಗೆ ವಾಹನ ಪಾರ್ಕಿಂಗ್ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.