ಇಸ್ತಾಂಬುಲ್: ಟರ್ಕಿಯ ಪ್ರಸಿದ್ಧಿ ನಗರ ಇಸ್ತಂಬುಲ್ನಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದೆ, ಇದರಿಂದಾಗಿ 10 ಮಂದಿ ಮೃತರಾಗಿದ್ದಾರೆ. 15ಮಂದಿಗೆ ಗಾಯಗಳಾಗಿವೆ.
ಇಸ್ತಾಂಬುಲ್ನ ಖ್ಯಾತ ಪ್ರವಾಸಿ ತಾಣ ಸುಲ್ತಾನಹಮೆತ್ ಸರ್ನಲ್ಲಿ ಈ ಸ್ಫೋಟ ಸಂಭವಿಸಿದೆ.
ತೀವ್ರ ಸ್ವರೂಪದ ಸ್ಫೋಟ ಇದಾಗಿದ್ದು, ಹೇಗೆ ಸಂಭವಿಸಿದೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ, ಅಲ್ಲದೇ ಯಾವುದರಿಂದ ಸ್ಫೋಟ ಸಂಭವಿಸಿದೆ ಎಂಬ ಬಗ್ಗೆಯೂ ನಿಖರ ಮಾಹಿತಿಯಿಲ್ಲ, ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರೇ ಈ ಸ್ಪೋಟವನ್ನು ನಡೆಸಿದ್ದಾರೆ. ಇದೊಂದು ಆತ್ಮಾಹುತಿ ಬಾಂಬ್ ದಾಳಿಯಾಗಿರಬೇಕು ಎಂಬ ಬಗ್ಗೆ ಅಧಿಕಾರಿಗಳು ಬಲವಾದ ಶಂಕೆ ವ್ಯಕ್ತಪಡಿಸಿದ್ದಾರೆ.
ಕುರ್ದಿಶ್ಗಳು, ಇಸ್ಲಾಮಿಕ್ ಉಗ್ರರು, ಎಡಪಂಥಿಯರು ಈ ಹಿಂದೆಯೂ ಟರ್ಕಿಯಲ್ಲಿ ದಾಳಿಗಳನ್ನು ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.