ಮುಂಬಯಿ: ಬಹುಕೋಟಿ ಆದರ್ಶ್ ಹೌಸಿಂಗ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌವಾಣ್ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಎ.24ರಂದು ವಿಚಾರಣೆ ನಡೆಸಲು ಸೋಮವಾರ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ.
ಆದರ್ಶ್ ಹಗರಣದ ಸಂಬಂಧ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಚವಾಣ್ ಅವರು ಸೋಮವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆಗೆ ಸುಪ್ರೀಂ ಸಮ್ಮತಿಸಿದಲ್ಲದೇ ಪ್ರಕರಣ ಸಂಬಂಧ ವಿಚಾರಣಾಧೀನ ನ್ಯಾಯಾಲಯದಲ್ಲಿ ತಡೆಯಾಜ್ಞೆ ಪಡೆಯುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆಯನ್ನೂ ನೀಡಿದೆ.
ಹಗರಣದ ಆರೋಪಿಗಳ ಪಟ್ಟಿಯಿಂದ ಚೌವಾಣ್ ಅವರ ಹೆಸರನ್ನು ಕೈಬಿಡಲು ಸಾಧ್ಯವಿಲ್ಲ ಎಂದು 2014ರ ನ.19ರಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿತ್ತು. ಅದಕ್ಕೂ ಮೊದಲು ಸಿಬಿಐ ನ್ಯಾಯಾಲಯ ಕೂಡ ಇದೇ ತೀರ್ಪನ್ನು ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.