ಸುಳ್ಯ: ಬೇಸಿಗೆ ಶಿಬಿರಗಳಲ್ಲಿ ಮಕ್ಕಳಲ್ಲಿನ ಸೃಜನಶೀಲತೆಯು ಅನಾವರಣಗೊಳ್ಳುತ್ತದೆ. ಮನೋರಂಜನೆಯೊಂದಿಗೆ ಬೌದ್ಧಿಕ ಚಟುವಟಿಕೆಗಳೂ ಇದ್ದಾಗ ಅದು ಮಕ್ಕಳ ಬೆಳವಣಿಗೆಗೆ ಪ್ರಯೋಜನಕಾರಿಯಾಗುತ್ತದೆ ಎಂದು ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಶೀಲಾ ಜಿ. ನಾಯಕ್ ಅವರು ಹೇಳಿದರು.
ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಲಿಂಗಪ್ಪ ಮಾತನಾಡಿ, ಸಮಾಜದಲ್ಲಿ ಬೆರೆಯುವಿಕೆ ಮತ್ತು ನಡವಳಿಕೆಯನ್ನು ಇಂತಹ ಬೇಸಿಗೆ ಶಿಬಿರಗಳು ಮಕ್ಕಳಿಗೆ ಕಲಿಸುತ್ತವೆ ಎಂದರು. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ವಿದ್ಯಾಶಾಂಭವ ಪಾರೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮೀ ದಾಮ್ಲೆ ಸ್ವಾಗತಿಸಿ ಶಿಬಿರದ ಸಂಚಾಲಕ ಪ್ರಸನ್ನ ಐವರ್ನಾಡು ವಂದಿಸಿದರು. ಶಿಬಿರದ ಕುರಿತು ಶಿಬಿರಾರ್ಥಿಗಳಾದ ಅಲಕನಂದಾ ಮತ್ತು ಪೃಥ್ವಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಿಬಿರದಲ್ಲಿ ತಯಾರಾದ ವಿವಿಧ ಸಾಂಸ್ಕೃತಿಕ ವೈಭವಗಳನ್ನು ಮತ್ತು ಕರಕುಶಲ ವಸ್ತುಗಳನ್ನು ಪ್ರದರ್ಶಿಸಲಾಯಿತು. ಶಿಬಿರದಲ್ಲಿ ಪೇಪರ್ಕಾಫ್ಟ್, ಮೋಜಿನಗಣಿತ, ಮೈಂಡ್ಗೇಮ್ಸ್, ಸರಳವಿಜ್ಞಾನ, ಕಥಾಸಮಯ, ನೃತ್ಯ, ನಾಟಕ, ಔಷಧಿಸಸ್ಯಗಳ ಪರಿಚಯವನ್ನು ಆಯೋಜಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.