ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾನಿಲಯದ ದಲಿತ ಸಂಶೋಧನಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಮತ್ತು ಕುಲಪತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರೋಹಿತ್ ವೆಮುಲ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಸೈನ್ಸ್ ಟೆಕ್ನಾಲಜಿ ಆಂಡ್ ಸೊಸೈಟಿ ಸ್ಟಡೀಸ್ನಲ್ಲಿ ಪಿಎಚ್ಡಿ ಮಾಡುತ್ತಿದ್ದ. ಈತನ ಆತ್ಮಹತ್ಯೆಯನ್ನು ಖಂಡಿಸಿ ವಿಶ್ವವಿದ್ಯಾನಿಲಯದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿದೆ.
ಎಸ್ಸಿ/ಎಸ್ಟಿ ಕಾಯ್ದೆಯಡಿ ದತ್ತಾತ್ರೇಯ ಮತ್ತು ಕುಲಪತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಎಬಿವಿಪಿ ಕಾರ್ಯಕರ್ತನೊಬ್ಬನಿಗೆ ಹೊಡೆದ ಹಿನ್ನಲೆಯಲ್ಲಿ ಈತ ಸೇರಿದಂತೆ ಇತರ ನಾಲ್ವರನ್ನು ಅಮಾನತುಗೊಳಿಸಲಾಗಿತ್ತು. ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣವನ್ನು ವಿಶ್ವವಿದ್ಯಾನಿಲಯ ಸಮಿತಿ ತನಿಖೆ ನಡೆಸಿತ್ತು, ತನಿಖೆಯಲ್ಲಿ ರೋಗಿತ್ ಮತ್ತು ನಾಲ್ವರು ತಪ್ಪಿತಸ್ಥರು ಎಂದು ಸಾಬೀತಾದ ಹಿನ್ನಲೆಯಲ್ಲಿ ಅವರನ್ನು ವಿಶ್ವವಿದ್ಯಾನಿಲಯ ಆವರಣದೊಳಕ್ಕೆ ಬಾರದಂತೆ ನಿರ್ಬಂಧ ವಿಧಿಸಲಾಗಿತ್ತು.
ಬಂಡಾರು ದತ್ತಾತ್ರೇಯ ಈ ಘಟನೆಯ ಬಗ್ಗೆ ಕ್ರಮಕೈಗೊಳ್ಳುವಂತೆ ಎಚ್ಆರ್ಡಿ ಸಚಿವೆ ಸ್ಮೃತಿ ಇರಾನಿಯವರಿಗೆ ಪತ್ರ ಬರೆದ ಬಳಿಕ ಇವರಿಗೆ ಅಮಾನತು ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಲಾಗಿದೆ. ಅದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.