ಬೆಳ್ತಂಗಡಿ : ತಾಲೂಕು ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ವಿಧವೆ ಗುಮಾಸ್ತೆಯೋರ್ವರಿಗೆ ಅನಗತ್ಯ ಕಿರುಕುಳ ನೀಡಿ ಇದೀಗ ಅವರನ್ನು ಬಂಟ್ವಾಳ ತಾಲೂಕಿನ ಪೊಳಲಿಗೆ ವರ್ಗಾವಣೆ ಮಾಡಲಾಗಿದೆ. ಉದ್ದೇಶ ಪೂರ್ವಕವಾಗಿ ಅವರಿಗೆ ಹಾಗೂ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದ್ದು ಅವರಿಗೆ ಮರಳಿ ಬೆಳ್ತಂಗಡಿ ಕಚೇರಿಗೆ ವರ್ಗಾವಣೆ ಮಾಡಿಸಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಹೇಳಿದ್ದಾರೆ.
ಅವರು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು. ಮಂಜುಳಾ ಎಸ್.ಎಂ ಅವರು ಬೆಳ್ತಂಗಡಿಯ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ದ್ವಿತೀಯದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಅನಗತ್ಯ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ ಅವರು ಉದ್ದೇಶ ಪೂರ್ವಕವಾಗಿ ಅವರನ್ನು ವರ್ಷದ ಹಿಂದೆ ಬಂಟ್ವಾಳಕ್ಕೆ ವರ್ಗಾವಣೆ ಮಾಡಲಾಗಿತ್ತು. ವಿಧವೆಯಾಗಿರುವ ಅವರು ತಮ್ಮ ಇಬ್ಬರು ಸಣ್ಣ ಮಕ್ಕಳೊಂದಿಗೆ ಬೆಳ್ತಂಗಡಿಯಲ್ಲಿ ಬಾಡಿಗೆ ಮನೆಯಲ್ಲೊಂದರಿದ್ದು ಇಲ್ಲಿಂದ ಹೋಗಿ ಅಲ್ಲಿ ಕೆಲಸ ಮಾಡುವುದುಕಷ್ಟವಾಗುತ್ತಿದೆ. ಆದುದರಿಂದ ಅವರಿಗೆ ಕೂಡಲೆ ಬೆಳ್ತಂಗಡಿಗೆ ವರ್ಗಾವಣೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಈ ಬೇಡಿಕೆಗೆ ಸರಕಾರ ಸ್ಪಂದಿಸದಿದ್ದರೆ ಬೆಳ್ತಂಗಡಿಯಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್, ಪಕ್ಷದ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯ ಎಂ.ಕೂಸಪ್ಪ, ದಲಿತ ಸಂಘರ್ಷ ಸಮಿತಿಯ ಪುತ್ತೂರು ಸಂಚಾಲಕ ಆನಂದ ಮಿತ್ತಬೈಲು, ಅಶ್ಪಕ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.