ಸುಳ್ಯ: ಗೌಡ ಜನಾಂಗದ ಮಾತೃ ಭಾಷೆಯಾದ ಅರೆ ಭಾಷೆಯನ್ನು ಉಳಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ದ.ಕ ಮತ್ತು ಕೊಡಗು ಭಾಗದ ಗೌಡ ಜನಾಂಗದವರು ಸಂಘಟಿತರಾಗಬೇಕಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಹೇಳಿದರು.
ಅವರು ಪೆರಾಜೆ ಶ್ರೀ ಶಾಸ್ತಾವು ದೇವಳದ ಕಾವೇರಿಗದ್ದೆಯಲ್ಲಿ ಗೌಡರ ಯುವ ಸೇವಾ ಸಂಘ, ಸುಳ್ಯ ಮತ್ತು ಗ್ರಾಮ ಸಮಿತಿ ಪೆರಾಜೆ ಇದರ ಆಶ್ರಯದಲ್ಲಿ ನಡೆದ ಕೊಡಗು, ದಕ್ಷಿಣ ಕನ್ನಡ, ಗೌಡ ಕುಟುಂಬಗಳ ಗೌಡ ಕಪ್ ಕ್ರಿಕೆಟ್ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಅಧ್ಯಕ್ಷತೆಯನ್ನು ಗೌಡರ ಯುವಸೇವಾ ಸಂಘದ ಪೆರಾಜೆ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ವಹಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಕೆವಿಜಿ ಇಂಜಿನಿಯರಿಂಗ್ ಕಾಲೇಜ್ನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಸುಳ್ಯ ಎ.ಪಿ.ಎಂ.ಸಿ ಉಪಾಧ್ಯಕ್ಷ ಪರಶುರಾಮ ಚಿಲ್ತಡ್ಕ, ಅರೆಭಾಷೆ ಅಕಾಡೆಮಿ ಸದಸ್ಯ ಮೊದುವೆಗದ್ದೆ ಭೋಜಪ್ಪ ಗೌಡ, ಸುಳ್ಯ ಗೌಡ ಸಮುದಾಯ ಭವನ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಸುಳ್ಯ ಗೌಡರ ಯುವ ಸೇವಾ ಸಂಘದ ಉಪಾಧ್ಯಕ್ಷ ಮಾಧವ ಗೌಡ, ಸುಳ್ಯ ಗೌಡರ ಯುವ ಸೇವಾ ಸಂಘದ ಕಾರ್ಯದರ್ಶಿ ಮೋಹನ್ ರಾಮ್ ಸುಳ್ಳಿ, ನಿರ್ದೇಶಕ ಎ.ಸಿ.ಹೊನ್ನಪ್ಪ, ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನವೀಕರಣ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ನಿಡ್ಯಮಲೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ತಿಲೋತ್ತಮ ಅಡ್ಕ ಭಾಗವಹಿಸಿದರು.
ಕ್ರಿಕೆಟ್ನಲ್ಲಿ ಗೌಡ ಕುಟುಂಬಗಳ ೬೮ ತಂಡಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಊರುಬೈಲು ಕುಟುಂಬ ತಂಡ ಮತ್ತು ದ್ವಿತೀಯ ಸ್ಥಾನವನ್ನು ವಾಡ್ಯಪ್ಪನ ಮನೆ ಕುಟುಂಬ ತಂಡ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.