ಬೆಳ್ತಂಗಡಿ : ಮಿನಿ ವಿಧಾನ ಸಭೆ ಚುನಾವಣೆಯೆಂದೇ ಕರೆಯಲ್ಪಡುವ ಜಿ.ಪಂ , ತಾ.ಪಂ ಚುನಾವಣೆಯನ್ನು ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರು ಆತ್ಮವಿಶ್ವಾಸದಿಂದ ಎದುರು ನೋಡುತ್ತಿದ್ದು. ಚುನಾವಣೆ ಎದುರಿಸಲು ಸಕಲ ತಯಾರಿ ನಡೆಸಲಾಗಿದೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಕಟಣೆ ತಿಳಿಸಿದೆ.
ಪ್ರಮುಖರ ತಂಡ ಈಗಾಗಲೇ ತಾಲೂಕಿನ 48 ಗ್ರಾ.ಪಂಚಾಯತ್ಗೆ ಭೇಟಿ ನೀಡಿದ್ದು ಪಂಚಾಯಿತಿ ಮಟ್ಟದ ತಯಾರಿ ನಡೆಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಜನವರಿ 22 ಶುಕ್ರವಾರ ಪರಂಗಿಪೇಟೆಯಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಅಯೋಜಿಸಲಾಗಿದ್ದು ತಾಲೂಕಿನಿಂದ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಜನವಿರೋಧಿ ನೀತಿಯಿಂದ ಜನತೆ ಬೇಸತ್ತಿದ್ದು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದೆ.
ಕುಮ್ಕಿ ಹಕ್ಕು ರೈತರಿಗೆ ನೀಡಬೇಕೆಂಬ ನಿರ್ಣಯ ಈ ಹಿಂದೆ ಬಿಜೆಪಿ ಸರ್ಕಾರದ ನಿರ್ಣಯವಾಗಿದ್ದು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಇದನ್ನು ಅನುಷ್ಟಾನಗೊಳಿಸುವಲ್ಲಿ ಎಡವಿದ್ದು ಇಂದಿನ ಸಮಸ್ಯೆಗೆ ಕಾರಣವಾಗಿದೆ.
ಕೃಷಿಕರ ಕುಮ್ಕಿ ಹಕ್ಕಿನ ಹೋರಾಟಕ್ಕೆ ಬಿಜೆಪಿ ಕಟಿಬದ್ದವಾಗಿದ್ದು ಸರ್ಕಾರ ಕೂಡಲೇ ಮದ್ಯಪ್ರವೇಶಿಸಿ ಕರಾವಳಿ ಪ್ರದೇಶ ಸೇರಿದಂತೆ ನಾಡಿನ ಲಕ್ಷಾಂತರ ಕೃಷಿಕರಿಗೆ ಆಗುವ ತೊಂದರೆಯನ್ನು ಮನಗಂಡು ಸೂಕ್ತಕ್ರಮ ಕೈಗೊಳ್ಳಬೇಕು. ಇಲ್ಲಿ ಬಿಜೆಪಿ ಜನಾಂದೋಲನದ ಮೂಲಕ ಹೋರಾಟ ನಡೆಸಿ ಕೃಷಿಕರಿಗೆ ನ್ಯಾಯ ಒದಗಿಸಲು ಮುಂದಾಗಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಬಾಲಕೃಷ್ಣ ವಿ.ಶೆಟ್ಟಿ, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು ರಂಜನ್ ಜಿ ಗೌಡ, ಜಿಲ್ಲಾ ಕಾರ್ಯದರ್ಶಿ ಶಾರದ ರೈ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ .ಸೀತಾರಾಮ್ ಬಿ.ಎಸ್, ಜಯಂತ್ ಕೋಟ್ಯಾನ್, ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.