ನವದೆಹಲಿ : ಭಾರತದಲ್ಲಿ ಮೊದಲ ಹಂತದಲ್ಲಿ ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಯಾಗಲಿರುವ 20 ನಗರಗಳ ಹೆಸರುಗಳನ್ನು ಕೇಂದ್ರ ಸರಕಾರ ಇಂದು ಮಧ್ಯಾಹ್ನ ಪ್ರಕಟಣೆ ಮಾಡಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸ್ಮಾರ್ಟ್ ಸಿಟಿ ಯೋಜನೆಯ ಮೊದಲನೇ ಹಂತದಲ್ಲಿ ಆಯ್ಕೆಯಾಗಿರುವ 20 ನಗರಗಳ ಹೆಸರನ್ನು ಪ್ರಕಟಿಸುವರು.
ಈಗಾಗಲೇ ವಿವಿಧ ರಾಜ್ಯ ಸರ್ಕಾರಗಳು ಈ ಯೋಜನೆಯಡಿಯಲ್ಲಿ ಸುಮಾರು 97 ನಗರಗಳ ಪ್ರಸ್ತಾವನೆಯನ್ನು ನಗರಾಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿತ್ತು. ಇವುಗಳ ಪೈಕಿ ಇಂದು ಮೊದಲ ಹಂತದಲ್ಲಿ 20 ನಗರಗಳನ್ನು ಘೋಷಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಮಂಗಳೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ತುಮಕೂರು, ಬೆಳಗಾವಿ ಇವುಗಳು ಕರ್ನಾಟಕ ರಾಜ್ಯದ ವತಿಯಿಂದ ಸ್ಮಾರ್ಟ್ ಸಿಟಿ ಯೋಜನೆಗೆ ಸಲ್ಲಿಸಿರುವ ನಗರಗಳಾಗಿವೆ.
ಯೋಜನೆಯ ಅನುಸಾರ ಸ್ಮಾಟ್ ಸಿಟಿಗೆ ಆಯ್ಕೆ ಆಗುವ ನಗರಗಳಲ್ಲಿ ಮೂಲಭೂತ ಸೌಕರ್ಯ, ಸಾರ್ವಜನಿಕ ಸಾರಿಗೆ, ಐಟಿ ಸಂಪರ್ಕ, ಈ-ಆಡಳಿತ ಕಾರ್ಯ ವೈಖರಿ ಅಭಿವೃದ್ಧಿಗಳಿಗೆ ಕ್ರಮ ಕೈಗೊಳ್ಳಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.