ಬೆಂಗಳೂರು: ಇಂದು ಸಂಜೆ (ಜ. 28) ಬೆಂಗಳೂರಿನಲ್ಲಿ ಎಂಟನೇ ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ವಿಧಾನಸೌಧದ ಎದುರು ಚಾಲನೆ ದೊರೆಯಲಿದೆ.
ವಿಧಾನ ಸೌಧದ ಮುಂಭಾಗ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಹಿರಿಯ ನಟಿ ಜಯಾ ಬಚ್ಚನ್ ಉದ್ಘಾಟಿಸಿಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
ಫೆ. 4 ರವರೆಗೆ ನಡೆಯಲಿರುವ ಈ ಸಿನಿಮೋತ್ಸವದಲ್ಲಿ ಸುಮಾರು 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. 15 ವಿಚಾರ ಸಂಕಿರಣ ಮತ್ತು ಕಾರ್ಯಾಗಾರಗಳೂ ನಡೆಯಲಿವೆ.
ವಿವಿಧ ದೇಶಗಳ ಮತ್ತು ಭಾರತದ ವಿಶಿಷ್ಟ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮೊದಲ ಬಾರಿಗೆ ಕನ್ನಡದ ‘ತಿಥಿ’ ಸಿನಿಮಾ ಉದ್ಘಾಟನಾ ಚಿತ್ರವಾಗಿ ಪ್ರದರ್ಶನಗೊಳ್ಳಲಿದೆ ಎನ್ನಲಾಗಿದೆ.
ಸುಮಾರು 4 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಸಿನಿಮೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅಂದಾಜಿಸಲಾಗಿದೆ.
ರಾಜಾಜಿನಗರದ ಓರಾಯನ್ ಮಾಲ್ನ ಪಿವಿಆರ್ ಸಿನಿಮಾಸ್ನಲ್ಲಿನ 11 ಪರದೆಗಳಲ್ಲಿ ಚಲನಚಿತ್ರೋತ್ಸವ ಪ್ರದರ್ಶನಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.