ಬಂಟ್ವಾಳ: ರಾಜ್ಯದಲ್ಲಿ ದಾಖಲೆ ನಿರ್ಮಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ನೈಜ ಮಾಹಿತಿ ನೀಡಿದಲ್ಲಿ ಯಶಸ್ವಿಗೊಳ್ಳುತ್ತದೆ ಎಂದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು.
ಕಳ್ಳಿಗೆ ಗ್ರಾಮದ ಸಚಿವರ ನಿವಾಸದಲ್ಲಿ ನೆರವೇರಿದ ಸಮೀಕ್ಷೆ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಿದ ಅವರು, ಹಿಂದುಳಿದ ವರ್ಗಗಳ ಅಭಿವೃದ್ಧಿಯ ದೃಷ್ಟಿಯಿಂದ ಈ ಸಮೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯದಲ್ಲಿ ಕಂದಾಯ, ಗ್ರಾ.ಪಂ, ಪುರಸಭೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಆಸ್ಥೆ ವಹಿಸುವಲ್ಲಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಸಮೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸಚಿವರ ಪತ್ನಿ ಶ್ರೀಮತಿ ಧನಭಾಗ್ಯ ರೈ ಅವರು ಉತ್ತರ ನೀಡಿದರು. ಈ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಡಾ.ಸಿ.ಸತೀಶ್ ಕುಮಾರ್, ಸಹಾಯಕ ಆಯಕ್ತ ಡಾ.ಡಿ.ಆರ್.ಅಶೋಕ್, ತಹಶೀಲ್ದಾರ್ ಪುರಂದರ ಹೆಗ್ಡೆ, ಉಪತಹಶೀಲ್ದಾರ್ ಭಾಸ್ಕರ್ ರಾವ್, ರೆವಿನ್ಯೂಇನ್ಸ್ಪೆಕ್ಟರ್ ನಾರಾಯಣ ಪೂಜಾರಿ, ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ತಾಲೂಕು ಕಚೇರಿ ಸಿಬ್ಬಂದಿ ಸದಾಶಿವ ಕೈಕಂಬ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.