ಬೆಂಗಳೂರು : ವಿಧಾನಸಭೆ ಉಪಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯ ಹಿನ್ನಲೆ 8 ಬೃಹತ್ ಸಮಾವೇಶಗಳನ್ನು ಕಾಂಗ್ರೆಸ್ ನಡೆಸಲಿದೆ ಚಿಂತನೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಅಲ್ಲದೆ ಈ ಚುನಾವಣೆಗಳಲ್ಲಿ ಸ್ಟಾರ್ ಪ್ರಚಾರಕರನ್ನು ಬಳಸಲು ಚಿಂತಿಸಿದ್ದು, ಕಾಂಗ್ರೇಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾಂಡಿಸ್, ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿತರ ನಾಯರು ಈ ಪಟ್ಟಿಯಲ್ಲಿದ್ದಾರೆ
ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ ಮತ್ತು ಸಾಧನೆಗಳನ್ನು ಜನರಿಗೆ ತಿಳಿಸಿ ಹೇಳಲು ಮತ್ತು ಹೆಚ್ಚಿನ ಮತಗಳನ್ನು ಪಡೆಯುವಲ್ಲಿ ಜನರನ್ನು ಸೆಳೆಯುವಲ್ಲಿ ಈ ಸಮಾವೇಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ವಿಧಾನಸಭೆ ಉಪಚುನಾವಣೆಗೆ ಮೂರು ಕ್ಷೇತ್ರಗಳಗೆ 5 ಮಂದಿಯಂತೆ ಸಚಿವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.