Saturday, January 30th, 2016
News13
ಬೆಂಗಳೂರು : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ವೇತನ ತಾರತಮ್ಯ ನಿವಾರಣೆ ಕುರಿತು ಶ್ರೀ ಕುಮಾರ್ ನಾಯಕ್ ವರದಿ ಅನುಷ್ಠಾನ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶಿಕ್ಷಕರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಪ್ರತಿನಿಧಿ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರತಿಭಟನೆಯಲ್ಲಿ ಭಾಗವಹಿಸಿ ಶಿಕ್ಷಕರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರ ತಡ ಮಾಡದೆ ಅವುಗಳನ್ನು ಸಂಪೂರ್ಣವಾಗಿ ಈಡೇರಿಸಬೇಕೆಂದು ಆಗ್ರಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.