ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಮತದಾನದ ದಿನದಂದು ಸಾರ್ವತ್ರಿಕ ರಜೆ ಫೋಷಿಸಲಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು , ಫೆ.13 ಮತ್ತು 20 ರಂದು ಮತಚಲಾವನೆ ಮಾಡಲು ಸಾರ್ವತ್ರಿಕ ರಜೆಯನ್ನು ರಾಜ್ಯ ಚುನಾವಣಾ ಆಯೋಗ ಫೋಷಿಸಿದೆ.
ಈ ರಜೆಯು ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಪಟ್ಟಣ ಪಂಚಾಯತ್, ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ. ಬ್ಯಾಂಕ್ಗಳು, ಜೀವ ವಿಮಾ ನಿಗಮ, ಬ್ಯಿಸಿನೆಸ್ ಟ್ರೇಡ್ ದಿಂದ ಹಿಡಿದು ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಮತದಾನದ ದಿನ ವೇತನ ಸಹಿತ ರಜೆಗೆ ಅರ್ಹರಾಗಿರುತ್ತಾರೆ.
ಮತದಾನ ನಡೆಯುವ ಮತಗಟ್ಟೆಗಳಲ್ಲಿ ಪೂರ್ವಭಾವಿ ತಯಾರಿಗಳಿಗಾಗಿ ಕಾರ್ಯ ನಿರ್ವಹಿಸಲು ಒಂದು ದಿನದ ಮುಂಚಿತವಾಗಿ ಫೆ.12 ಮತ್ತು 19 ರಂದು ಅವಶ್ಯಕತೆ ಯೆಂದೆನಿಸಿದರೆ ಮತ ಎಣಿಕೆ ದಿನದಂದು ರಜೆ ಘೊಷಿಸಲು ಆಯೋಗ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.