ನವದೆಹಲಿ: 2016-17ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನವು ಫೆ. 23 ರಿಂದ ಮಾರ್ಚ್ 16ರ ವರೆಗೆ ನಡೆಯಲಿದೆ. ಫೆ. 23 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಲೋಕಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿರುವರು. ಫೆ. 25 ರಂದು ರೈಲ್ವೆ ಬಜೆಟ್ ಮಂಡನೆ, ಫೆ. 29 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಫೆ. 29 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು, ರೈಲ್ವೆ ಬಜೆಟ್ ಅನ್ನು ಫೆ.25 ರಂದು ರೈಲ್ವೆ ಸಚಿವ ಸುರೇಶ್ ಪ್ರಭು ಮಂಡಿಸಲಿದ್ದಾರೆ. ಈ ಸಲದ ಬಜೆಟ್ ಜನಪರ ಬಜೆಟ್ ಆಗಲಿದೆಯೇ ಎಂದು ಕಾದು ನೋಡಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.