ಬೆಂಗಳೂರು: ಅದಿರು ಕಳ್ಳಸಾಗಣೆ ಆರೋಪದ ಮೇಲೆ ಮತ್ತೆ ನ್ಯಾಯಾಂಗ ಬಂಧನದಲ್ಲಿರುವ ವಿಜಯನಗರದ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಂಧನದಲ್ಲಿ ಇದ್ದುಕೊಂಡು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿರುವ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ಮೂಲಕ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಕ್ಷೇತ್ರದಲ್ಲಿ ಹರಡುತ್ತಿದ್ದಂತೆಯೇ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾರಂಭಿಸಿದ್ದಾರೆ. ಕೆಲ ಉದ್ರಿಕ್ತ ಬೆಂಬಲಿಗರು ಆಟೊರಿಕ್ಷಾ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರಕ್ಕೆ ತಡೆ ಒಡ್ಡಿ ಟೈರ್ಗಳಿಗೆ ಬೆಂಕಿ ಹಚ್ಚಿದರು. ಅಲ್ಲದೇ ಶಾಸಕರು ಕೂಡಲೇ ರಾಜೀನಾಮೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ನ್ಯಾಯಾಲಯಗಳು ಒಂದು ಹಂತದ ವಿಚಾರಣೆ ನಡೆಸಿದ್ದರೂ ಮತ್ತೆ ಮತ್ತೆ ಬಂಧಿಸುವ ಮೂಲಕ ಶಾಸಕರಿಗೆ ಮಾನಸಿಕ ಹಿಂಸೆ ನೀಡುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.