ಬೆಂಗಳೂರು : ಕನ್ನಡದ ಸಾಹಿತಿ ಸಾ.ಶಿ ಮರುಳಯ್ಯ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷವಯಸ್ಸಾಗಿದ್ದು ಅವರು ಇಬ್ಬರು ಗಂಡುಮಕ್ಕಳು, ಓರ್ವ ಮಗಳನ್ನು ಅಗಲಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಸಾ.ಶಿ ಮರುಳಯ್ಯರವರು ಕಳೆದ ೧೫ ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ಸಾ.ಶಿ ಮರುಳಯ್ಯರವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದೇವರಾಜ ಬಹದ್ದೂರ್ ಪ್ರಶಸ್ತಿ, ಎಚ್.ನರಸಿಂಹಯ್ಯ ಪ್ರಶಸ್ತಿಗಳು ಸೇರಿದಂತೆ ಇನ್ನೂ ಹಲವು ಪ್ರಶಸ್ತಿಗಳು ಅವರನ್ನು ಅರಿಸಿ ಬಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.