ಸುಳ್ಯ : ಒಬ್ಬ ವ್ಯಕ್ತಿಯಿಂದ ಪರಿವರ್ತನೆ ಅಸಾಧ್ಯ. ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ಮಾತ್ರ ಸಮಾಜದಲ್ಲಿ ಪರಿವರ್ತನೆಯಾಗಬಹುದು. .ಬಿ.ಆರ್.ಅಂಬೇಡ್ಕರ್ ಅವರು ಪರಿವರ್ತನೆಯ ಹರಿಕಾರರಾಗಿದ್ದವರು. ಅವರ ಬದುಕು ನಮಗೆ ದಾರಿ ದೀವಿಗೆಯಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಪಂಚಾಯಿತಿ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೨೪ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮೊಳಗೆ ಪರಸ್ಪರ ಇರುವ ದ್ವೇಷ ತೊಲಗಿ ನಮ್ಮಲ್ಲಿ ಬದಲಾವಣೆ ಆದರೆ ಮಾತ್ರ ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಬೆಳೆಯಲು ಸಾಧ್ಯ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಮಾತನಾಡಿ `ಸಂವಿಧಾನವನ್ನು ರಚಿಸಿ ದೇಶದ ಎಲ್ಲ ವರ್ಗದ ಜನರಿಗೂ ಸಮಾನತೆಯನ್ನು ಪ್ರತಿಪಾದಿಸಿದ ಮಾನವತಾವಾದಿಯಾಗಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಎಂದು ಸ್ಮರಿಸಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂದರಾಜ್ ಸಂಕೇಶ ಮತ್ತು ನಾರಾಯಣ ಕಿಲಂಗೋಡಿ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ತಾ.ಪಂ ಉಪಾಧ್ಯಕ್ಷೆ ಮಮತ ಬೊಳುಗಲ್ಲು, ತಹಶೀಲ್ದಾರ್ ಶ್ರೀನಿವಾಸ ಶೆಟ್ಟಿ. ಉಪಸ್ಥಿತರಿದ್ದರು. ಸುಬ್ರಹ್ಮಣ್ಯದ ವಿಧ್ಯಾರ್ಥಿ ನಿಲಯದ ಮೇಲ್ವಿಚಾರಕ ಬಾಲಕೃಷ್ಣ ಅವರನ್ನು ಸನ್ಮಾನಿಸಲಾಯಿತು.
ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲೇಶಪ್ಪ ಸ್ವಾಗತಿಸಿ, ಶಿಕ್ಷಣ ಸಂಯೋಜಕ ಕೇಶವ ಸಿ.ಎ ವಂದಿಸಿದರು. ದಯಾನಂದ ಪತ್ತುಕುಂಜ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.