ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಸಂಘ ಫೆ.17 ರಂದು ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳ ಬಂದ್ಗೆ ರಾಜ್ಯ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಕರೆ ನೀಡಿದೆ.
ರಾಜ್ಯ ಸರಕಾರ ಅತಿಥಿ ಉಪನ್ಯಾಸಕರಿಗೆ ಸರಿಯಾಗಿ ಗೌರವ ಧನ ನೀಡದೆ ಸತಾಯಿಸುತ್ತಿದ್ದು, ಪ್ರತಿ ವರ್ಷವು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯನ್ನು ನಡೆಸುವ ಬದಲು ಹೊಸ ಹುದ್ದೆಗಳಿಗೆ ಮಾತ್ರ ಆಯ್ಕೆ ಪ್ರಕ್ರಿಯೆ ಕೈಗೊಂಡು ಹಿಂದಿನ ವರ್ಷಗಳಲ್ಲಿ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಕೈಬಿಡದೆ ಅವರ ಸೇವೆಯನ್ನು ಹಾಗೆಯೇ ಮುಂದುವರೆಸುವುದು ಸೇರಿದಂತೆ ದುಡಿಯುತ್ತಿರುವ ಸಹಸ್ರಾರು ಉಪನ್ಯಾಸಕರು ಕಳೆದ 25 ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದರು.
ಅತಿಥಿ ಉಪನ್ಯಾಸಕರೊಂದಿಗೆ ಮಾತನಾಡಿ ಸಚಿವರು ಭರವಸೆ ನೀಡಿರುತ್ತಾರೆ. ಆದರೆ ಅಧಿಕಾರಿಗಳು ಅದಕಕ್ಕೆ ವಿರುದ್ಧ ಮಾತಾಡುತ್ತಿದ್ದಾರೆ . ಈ ಎಲ್ಲಾ ವಿಷಯಗಳಿಂದ ಸೇವಾ ಭದ್ರತೆಗಾಗಿ ರಾಜ್ಯ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಬಂದ್ಗೆ ಕರೆ ನೀಡಿದೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.