ನವದೆಹಲಿ: ಜವಹಾರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಕೆಲ ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ಮತ್ತು ಕಾಶ್ಮೀರ ಸ್ವಾತಂತ್ರ್ಯದ ಬಗ್ಗೆ ಘೋಷಣೆ ಕೂಗಿರುವುದಕ್ಕೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
’ದೇಶದ್ರೋಹದ ಘೋಷಣೆಗಳನ್ನು ಕೂಗಿ ಯಾರಾದರು ದೇಶದ ಸಮಗ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದರೆ ಅವರನ್ನು ಖಂಡಿತ ಕ್ಷಮಿಸಲಾರೆವು’ ಎಂದು ಅವರ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ ಅಫ್ಜಲ್ ಹುತಾತ್ಮ ಎಂದು ಘೋಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಜರುಗಿಸುವಂತೆ ದೆಹಲಿ ಪೊಲೀಸರಿಗೆ ಆದೇಶಿಸಿದ್ದಾಗಿ ಅವರು ಹೇಳಿದ್ದಾರೆ.
ಪ್ರಸ್ತುತ ದೇಶದ್ರೋಹಿ ವಿದ್ಯಾರ್ಥಿಗಳ ವಿರುದ್ಧ ದೇಶ ದ್ರೋಹ ಪ್ರಕರಣವನ್ನ ದಾಖಲಿಸಿ, ಎಫ್ಐಆರ್ ದಾಖಲು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.