ಸುಳ್ಯ : ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಮತ್ತು ಸಂಸ್ಕೃತಿಯನ್ನು ಸಮೃದ್ಧಗೊಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ನಾವು ಎಲ್ಲರೂ ಒಂದಾಗಬೇಕು ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೊಲ್ಯದ ಗಿರೀಶ್ ಹೇಳಿದರು.
ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಆಶ್ರಯದಲ್ಲಿ ಕೊಡಿಯಾಲಬೈಲಿನ ಗೌಡರ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ವಿಷು ಹಬ್ಬ ಆಚರಣೆ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅರೆಭಾಷೆ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಅರೆಭಾಷೆ ಅಕಾಡೆಮಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ. ಸುಳ್ಯದಲ್ಲಿಯೂ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಡಿಸೆಂಬರ್ನಲ್ಲಿ ಗೌಡರ ಯುವ ಸೇವಾ ಸಂಘದ ನೇತೃತ್ವದಲ್ಲಿ ಸುಳ್ಯದಲ್ಲಿ ನಡೆಯುವ ವಿಶ್ವ ಗೌಡ ಸಮ್ಮೇಳನಕ್ಕೆ ಅಕಾಡೆಮಿಯ ವತಿಯಿಂದ 10 ಲಕ್ಷ ರೂ ಅನುದಾನವನ್ನು ನೀಡುವುದಾಗಿ ಅವರು ಘೋಷಿಸಿದರು.
ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. `ಮುಂದಿನ ಡಿಸೆಂಬರ್ನಲ್ಲಿ ವಿಶ್ವ ಗೌಡ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದ್ದು. ಅದರ ಯಶಸ್ವಿಗೆ ಸಮುದಾಯದ ಎಲ್ಲರು ಕೈಜೋಡಿಸಬೇಕು ಎಂದು ಅವರು ಹೇಳಿದರು.
ದ.ಕ. ಮತ್ತು ಕೊಡಗು ಗೌಡ ಅಭಿವೃದ್ಧಿ ಸಮಾಜ ಸೇವಾ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅರೆಭಾಷೆ ಅಕಾಡೆಮಿ ಅಧ್ಯಕ್ಷರನ್ನು ಮತ್ತು ಸದಸ್ಯರನ್ನು ಸನ್ಮಾನಿಸಿದರು.
ಅರೆಭಾಷೆ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ , ಸದಸ್ಯರಾದ ಮದುವೆಗದ್ದೆ ಬೋಜಪ್ಪ ಗೌಡ, ಬಿ.ಸಿ.ವಸಂತ, ಸದಾನಂದ ಮಾವಜಿ, ಯಶವಂತ ಕುಡೆಕಲ್ಲು, ಸಹ ಸದಸ್ಯರಾದ ಪಿ.ಎಸ್ ಕಾರ್ಯಪ್ಪ ಗೌಡ, ಅಣ್ಣಾಜಿ ಗೌಡ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ್ ಅಭಿನಂದನಾ ಭಾಷಣ ಮಾಡಿದರು.
ಬಿಸು ಹಬ್ಬದ ಬಗ್ಗೆ ಉಪನ್ಯಾಸ : ಬಿಸು ಹಬ್ಬದ ಆಚರಣೆ ಬಗ್ಗೆ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಉಪನ್ಯಾಸಕಿ ಹರಿಣಾಕ್ಷಿ ಕೇವಳ ಉಪನ್ಯಾಸ ನೀಡಿದರು. ವೈಜ್ಞಾನಿಕವಾಗಿ ಪ್ರಗತಿ ಹೊಂದಿದ ನಾವು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ಹಿನ್ನಡೆಯಾಗುತ್ತಿದ್ದೇವೆ ಅಲ್ಲದೆ ಪ್ರಾಶ್ಚಾತ್ಯ ಸಂಸ್ಕೃತಿಯತ್ತ ವಾಲುತ್ತಿದ್ದೇವೆ ಈ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವ ಕಾರ್ಯಕ್ರಮ ಅಗತ್ಯ ಎಂದರು.
ಗೌಡ ಯುವ ಸೇವಾ ಸಂಘದ ಕೋಶಾಧಿಕಾರಿ ಪಿ.ಸಿ.ಜಯರಾಮ, ಕಾರ್ಯದರ್ಶಿ ಮೋಹನ್ರಾಂ ಸುಳ್ಳಿ, ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಗೌಡ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ತರುಣ ಘಟಕದ ಅಧ್ಯಕ್ಷ ಶ್ರೀಕಾಂತ ಮಾವಿನಕಟ್ಟೆ, ಗೌಡ ಸಮುದಾಯಭವನ ನಿಣ ಸಮಿತಿಯ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್.ಆರ್.ಸೂರಯ್ಯ ಸ್ವಾಗತಿಸಿ, ಚಂದ್ರಶೇಖರ ಪೇರಾಲು ವಂದಿಸಿದರು. ಕೆ.ಟಿ.ವಿಶ್ವನಾಥ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.