ಜಮ್ಮು: ತಿಂಗಳುಗಳಿಂದ ರಾಷ್ಟ್ರಪತಿ ಆಡಳಿತದಲ್ಲಿರುವ ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆಯ ಕಾಲ ಸನ್ನಿಹಿತವಾದಂತೆ ಗೋಚರಿಸುತ್ತಿದೆ. ಬುಧವಾರ ಬಿಜೆಪಿ ಮುಖಂಡ ರಾಮ್ ಮಾಧವ್ ಅವರು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೆಹಬೂಬ ಅವರ ನಿವಾಸದಲ್ಲಿ ಒಂದು ಗಂಟೆಗಿಂತಲೂ ಹೆಚ್ಚು ಕಾಲ ಇಬ್ಬರು ಮುಖಂಡರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದು ಬಿಜೆಪಿ ಮತ್ತು ಪಿಡಿಪಿ ನಡುವೆ ನಡೆಯುತ್ತಿರುವ ಸರ್ಕಾರ ರಚನೆಯ ಬಗೆಗಿನ ಮೊದಲ ಅಧಿಕೃತ ಮಾತುಕತೆಯಾಗಿದೆ.
ಕೇಂದ್ರ ಬಿಜೆಪಿ ಸರ್ಕಾರ ಜಮ್ಮು ಕಾಶ್ಮೀರದ ಜನತೆಯ ವಿಶ್ವಾಸ ಗಳಿಸಬೇಕು ಮತ್ತು ಸಮಸ್ಯೆಗಳತ್ತ ಕ್ರಮಕೈಗೊಳ್ಳಬೇಕು ಎಂದು ಬೇಡಿಕೆಯಿಟ್ಟು ಮೆಹಬೂಬ ಅವರು ಬಿಜೆಪಿಯೊಂದಿಗೆ ಸರ್ಕಾರ ರಚನೆಗೆ ಹಿಂದೇಟು ಹಾಕಿದ್ದರು.
ಇದೀಗ ರಾಮ್ ಮಾಧವ್ ಅವರು ಸರ್ಕಾರ ರಚನೆಯ ಮಾತುಕತೆಯನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಇಬ್ಬರು ಮುಖಂಡ ಭೇಟಿಯ ವಿಷಯಗಳನ್ನು ರಹಸ್ಯವಾಗಿ ಇಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.