ಬೆಳ್ತಂಗಡಿ : ಫೆ.20ರಂದು ನಡೆಯಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 203174 ಮತದಾರರು ಮತಚಲಾಯಿಸಲಿದ್ದು, ಮತದಾನಕ್ಕೆ ಎಲ್ಲಾರೀತಿಯ ಸಿದ್ಧತೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ. ಗುರುವಾರ ಇಲ್ಲಿನ ತಾಲೂಕು ಕಚೇರಿಯಲ್ಲಿ ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತಾಲೂಕಿನಲ್ಲಿ 231 ಮತದಾನ ಕೇಂದ್ರಗಳಿನ್ನು ತೆರೆಯಲಾಗಿದೆ. 49 ಸೂಕ್ಷ್ಮ, 72 ಅತೀಸೂಕ್ಷ್ಮ ಹಾಗೂ 110 ಸಾಮಾನ್ಯ ಮತದಾನ ಕೇಂದ್ರಗಳಿದೆ. 45 ನಕ್ಸಲ್ ಸಕ್ರಿಯ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಆ ಬೂತ್ಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗುವುದು. ಮತದಾನ ಪ್ರಕ್ರಿಯೆಯಲ್ಲಿ 1270 ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಮತಗಟ್ಟೆಗಳ ಮೇಲುಸ್ತುವಾರಿಗೆ ಓರ್ವ ನೋಡೆಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಪ್ರತೀ ತಾಲೂಕು ಪಂಚಾಯತ್ ಕ್ಷೇತ್ರಕ್ಕೊಂದರಂತೆ 26 ಮಂದಿಯನ್ನು ಸೆಕ್ಷರ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಮತದಾನದ ಸಂದರ್ಭದಲ್ಲಿ ಮೊದಲು ಜಿಲ್ಲಾ ಪಂಚಾಯತ್ ಮತದಾನವನ್ನು ಮಾಡಿ ಬಳಿಕ ತಾಲೂಕು ಪಂಚಾಯತ್ಗೆ ಮತದಾನ ಮಾಡಲು ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತೀ ಮತದಾನಕೇಂದ್ರಕ್ಕೆ 5 ಮಂದಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ. 1100 ಕ್ಕಿಂತ ಹೆಚ್ಚಿನ ಮತದಾರರಿದ್ದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತಾಲೂಕಿನಲ್ಲಿ 519 ಅಂಚೆಮತಗಳಿದ್ದು, ಈ ಬಗ್ಗೆ ಈಗಾಗಲೇ ಅವರಿಗೆ ಮತಪತ್ರ ನೀಡಲಾಗಿದೆ. ಚುನಾವಣೆ ಫಲಿತಾಂಶದ ದಿನ ಬೆಳಿಗ್ಗೆ 8 ಗಂಟೆಯ ಮೊದಲುಅವರು ಮತದಾನವನ್ನು ಮಾಡಬಹುದಾಗಿದೆ ಎಂದು ತಿಳಿಸಿದರು. ಚುನಾವಣಾಧಿಕಾರಿ ರಾಜು ಮೊಗವೀರ, ತಹಸೀಲ್ದಾರ್ ಪ್ರಸನ್ನಮೂರ್ತಿಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.