ಪುತ್ತೂರು : ಮಾನವೀಯತೆ ನೆಲೆಯಿಂದ ಸಮಾಜದ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್. ಅವರ ಆದರ್ಶಗಳು ನಮಗೆ ಚೈತನ್ಯದಾಯಕವಾಗಿರಲಿ ಎಂದು ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು.ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬ್ರಿಟಿಷರು ಭಾರತವನ್ನು ಒಡೆದು ಆಳುವ ನೀತಿ ಅನುಸರಿಸಿದರು. ಇದಕ್ಕಾಗಿ ಹಿಂದು ಹಾಗೂ ಮುಸ್ಲಿಮರ ನಡುವೆ ಒಡಕು ಮೂಡಿಸಿದರು. ಆಗ ಕಾಂಗ್ರೆಸ್ನ ಮುಂಚೂಣಿಯಲ್ಲಿದ್ದ ಅಂಬೇಡ್ಕರ್, ಗಾಂಧೀಜಿ, ಜವಾಹರ್ಲಾಲ್ ನೆಹರು ಮೊದಲಾದವರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ಹಮ್ಮಿಕೊಂಡಿದ್ದರು ಎಂದು ನೆನಪಿಸಿಕೊಂಡರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ, ತಳಮಟ್ಟದಿಂದಲೇ ಕಾಂಗ್ರೆಸ್ ಬಲಪಡಿಸಲು ಗ್ರಾಪಂ ಚುನಾವಣೆ ತೀರಾ ಅಗತ್ಯ. ರಾಜಕೀಯ ತಂತ್ರಗಾರಿಕೆ ಕೊರತೆಯಿಂದಾಗಿ ಸೊಸೈಟಿಗಳು ಕೈತಪ್ಪುತ್ತಿವೆ. ಆದರೆ ಗ್ರಾಪಂ ಚುನಾವಣೆಯಲ್ಲಿ ಹೀಗಾಗಲು ಅವಕಾಶ ನೀಡಬಾರದು. ಎಲ್ಲರೂ ಒಗ್ಗಟ್ಟಾಗ ಕಾರ್ಯತಂತ್ರ ರೂಪಿಸಬೇಕು. ಶಾಸಕರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಸಿ, ಬಳಿಕ ಗ್ರಾಮ ಸಮಿತಿ ರಚಿಸಲಾಗುವುದು. ಗ್ರಾಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು ಎಂದರು.
ಅಭಿಪ್ರಾಯ ವ್ಯಕ್ತಪಡಿಸಿದ ತಾಪಂ ಸದಸ್ಯೆ ಝೊಹರಾ ನಿಸಾರ್, ಅಭ್ಯರ್ಥಿ ಆಯ್ಕೆಯನ್ನು ಆದಷ್ಟು ಶೀಘ್ರವಾಗಿ ಮಾಡಬೇಕು. ಇಲ್ಲವಾದರೆ ಮತದಾರರಿಗೆ ಅಭ್ಯರ್ಥಿ ಪರಿಚಯ ಮಾಡಲು ಕಷ್ಟವಾಗುತ್ತದೆ ಎಂದರು.ಶಾಸಕಿ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಷದ್ ದರ್ಬೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝಲ್ ರಹೀಂ, ವಿಶ್ವನಾಥ ರೈ ಬೂಡು ಉಪಸ್ಥಿತರಿದ್ದರು. ಕೃಷ್ಣಪ್ರಸಾದ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.