ಬೆಂಗಳೂರು : ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕಿಂಗ್ ಜಾರಿಗೆ ತರಲು ಬಿಬಿಎಂಪಿ ಚಿಂತಿಸಿದೆ. ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಈ ಹಿಂದೆ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಿತ್ತು. ಆಗ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಕಾರಣ ಬಿಬಿಎಂಪಿ ಈ ಯೋಜನೆ ಕೈಬಿಡಬೇಕಾಯಿತು. ಆದರೆ ಈಗ ಇದನ್ನು ಜಾರಿಗೊಳಿಸಲು ಚಿಂತಿಸುತ್ತಿದ್ದು ಟೆಂಡರ್ ಕರೆಯಲಾಗಿದೆ.
ಬೆಂಗಳೂರಿನಲ್ಲಿ ಸುಮಾರು 50 ಕ್ಕೂ ಹೆಚ್ಚು ರಸ್ತೆಗಳಿಗೆ ಈ ವ್ಯವಸ್ಥೆಯನ್ನು ಜಾರಿಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲು ಚಿಂತಿಸಲಾಗಿದೆ. ಈ ವರ್ಷದ ಏಪ್ರಿಲ್ಗೆ ಈ ವ್ಯವಸ್ಥೆ ಜಾರಿಗೆ ಬರಲಿದೆ ಎನ್ನಲಾಗಿದೆ.
ಜನರಿಗೆ ಸುಲಭವಾಗುವಂತೆ ಈ ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದು, ಪೇ ಅಂಡ್ ಪಾರ್ಕಿಂಗ್ ಶುಲ್ಕವನ್ನು ಪಾವತಿಸಲು ಕ್ರೆಡಿಟ್ಕಾರ್ಡ್, ಡೆಬಿಟ್ ಕಾರ್ಡ್, ಸ್ಮಾರ್ಟ್ ಕಾರ್ಡ್ ಬಳಕೆಯ ಸೌಕರ್ಯ ನೀಡಲು ಚಿಂತನೆ ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.