ನವದೆಹಲಿ: ಭೂಸ್ವಾಧೀನ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ನವದೆಹಲಿಯಲ್ಲಿ ‘ಕಿಸಾನ್ ರ್ಯಾಲಿ’ (ರೈತರ ಸಮಾವೇಶ’ವನ್ನು ಏರ್ಪಡಿಸಲಿದೆ.
ಸರ್ಕಾರದ ಬಗೆಗೆ ರೈತರಲ್ಲಿ ಮೂಡಿರುವ ಅಪನಂಬಿಕೆಯನ್ನು ಅಳಿಸುವ ಉದ್ದೇಶವೂ ಈ ಸಮಾವೇಶದ ಹಿಂದಿದೆ.
‘ಭೂಸ್ವಾಧೀನ ಮಸೂದೆ ರೈತ ವಿರೋಧಿ ಎಂದು ಹೇಳುವ ಮೂಲಕ ಕೆಲವು ಪಕ್ಷಗಳು ರೈತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತಿವೆ. ಈ ಸಮಾವೇಶದ ಮೂಲಕ ರೈತರ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ರೈತರಿಗೆ ಮನದಟ್ಟು ಮಾಡುತ್ತೇವೆ’ ಎಂದು ಬಿಜೆಪಿ ಮುಖಂಡ ಸತೀಶ್ ಉಪಧ್ಯಾಯ ತಿಳಿಸಿದ್ದಾರೆ.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ದೆಹಲಿಯ ಬಿಜೆಪಿ ಸಂಸದರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.