ಬೆಂಗಳೂರು: ರಾಜ್ಯದಲ್ಲಿ ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳ ಮತ ಎಣಿಕೆ ಕಾರ್ಯ ಮಂಗಳವಾರ ಬೆಳಿಗ್ಗೆಯಿಂದ ಆರಂಭಗೊಂಡಿದೆ. ಮಧ್ಯಾಹ್ನದ ವೇಳೆಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಫೆ.12ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.74.37ರಷ್ಟು ಮತದಾನ ನಡೆದಿದೆ. ಫೆ.20ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಶೇ.68ರಿಂದ70ರಷ್ಟು ಮತದಾನವಾಗಿದೆ.
ಒಟ್ಟು 530 ಜಿಲ್ಲಾ ಪಂಚಾಯತ್ ಸ್ಥಾನಗಳಿಗೆ ಮತ್ತು 1,936 ತಾಲೂಕು ಪಂಚಾಯತ್ಗಳಿಗೆ ಮತದಾನ ನಡೆದಿದೆ.
2,159 ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರೆ, 6,457ಅಭ್ಯರ್ಥಿಗಳು ತಾಲೂಕು ಪಂಚಾಯತ್ ಚುನಾವಣೆಗಳಿಗೆ ಸ್ಪರ್ಧಿಸಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಚುನಾವಣೆ ದೊಡ್ಡ ಅಗ್ನಿ ಪರೀಕ್ಷೆಯಾಗಿದ್ದು, ಸರ್ಕಾರ ಮತ್ತು ಪ್ರತಿಪಕ್ಷದ ಕಾರ್ಯವೈಖರಿಯ ಬಗ್ಗೆ ಗ್ರಾಮೀಣ ಜನರಿಗಿರುವ ಅಭಿಪ್ರಾಯ ಈ ಚುನಾವಣೆಯಲ್ಲಿ ಪ್ರತಿಫಲಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.