ವಿಜಯವಾಡ: ಆಂಧ್ರಪ್ರದೇಶದ 13 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ಎಲ್ಇಡಿ ಬಲ್ಬ್ ಬಳಕೆಯಿಂದ ಕಳೆದ ವರ್ಷ ಒಟ್ಟು 421 ಮಿಲಿಯನ್ ಯೂನಿಟ್ ವಿದ್ಯುತ್ ಉಳಿತಾಯವಾಗಿರುವುದಾಗಿ ಸಮೀಕ್ಷೆಯೊಂದು ಬಹಿರಂಗಪಡಿಸಿದೆ.
ಅನಂತಪುರಂ, ಗುಂಟೂರು, ದಕ್ಷಿಣ ಗೋದವರಿ ಮತ್ತು ಶ್ರೀಕಕುಳಂ ಜಿಲ್ಲೆಗಳಲ್ಲಿ ಪ್ರತಿ ಮನೆಗೆ 9 ವ್ಯಾಟ್ನ 2 ಎಲ್ಇಡಿ ಬಲ್ಬ್ನಂತೆ 57.03 ಲಕ್ಷ ಎಲ್ಇಡಿ ಬಲ್ಬ್ಗಳನ್ನು ಹಂಚಲಾಗಿದೆ. ಆಂಧ್ರ ಸರ್ಕಾರ ರಾಜ್ಯದ 13 ಜಿಲ್ಲೆಗಳಲ್ಲಿ 1.87 ಕೋಟಿ ಎಲ್ಇಡಿ ಬಲ್ಬ್ಗಳನ್ನು ಹಂಚುವ ಗುರಿ ಹೊಂದಿದ್ದು, ಈವರೆಗೆ ಒಟ್ಟು 1.75 ಕೋಟಿ ಬಲ್ಬ್ಗಳನ್ನು ಹಂಚಲಾಗಿದೆ ಎಂದು ಆಂಧ್ರ ವಿಶ್ವವಿದ್ಯಾಲಯ ಮತ್ತು ಇಂಜಿನಿಯರಿಂಗ್ ಸ್ಟಾಫ್ ಕಾಲೇಜ್ ಆಫ್ ಇಂಡಿಯಾ ನಡೆಸಿದ ಸಮೀಕ್ಷೆಯಿಂದ ತಿಳಿಸಿದೆ.
ಪ್ರತಿ ಬಲ್ಬ್ನಿಂದ 73.7 ಯೂನಿಟ್ ವಿದ್ಯುತ್ ಉಳಿತಾಯವಾಗಿದೆ ಎಂದು ಹೇಳಿದೆ.
ಕೇಂದ್ರ ವಿದ್ಯುತ್ ಸಚಿವ ಪಿಯುಷ್ ಗೋಯಾಲ್ ಅವರು ನೆಲ್ಲೋರ್ನಲ್ಲಿ ಫೆ.27 ರಂದು ಸಮೀಕ್ಷೆಯ ವರದಿ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಪಾಲ್ಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.