ಉಪ್ಪುಂದ: ಇಂದು ಎಲ್ಲಾ ಧರ್ಮಗಳ ಜನರಲ್ಲಿಯೂ ತಮ್ಮ ಧರ್ಮವೇ ಶ್ರೇಷ್ಠ ಎಂಬ ಭಾವನೆ ಇದೆ. ಆದರೆ ಎಲ್ಲಾ ಧರ್ಮಗಳಲ್ಲಿಯೂ ಅದರದ್ದೇ ಆದ ಪಾವಿತ್ರ್ಯತೆಯನ್ನು ಹೊಂದಿದೆ. ಇಂದು ಜನರು ಧರ್ಮಾಂಧತೆಯಲ್ಲಿ ಮುಳುಗಿದ್ದು, ಇದರಿಂದ ಹೊರಬರಬೇಕು. ಅದೇ ನಾವು ಅಂಬೇಡ್ಕರ್ರಿಗೆ ಕೊಡುವ ಗೌರವವಾಗಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.
ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜೇಸಿಐ ಉಪ್ಪುಂದ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 124ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಇಂದು ಕೇವಲ ಕೆಲವೆ ವರ್ಗಗಳಿಗೆ ಮಾತ್ರ ಸೀಮಿತಗೊಳಿಸಿರುವುದು ದೇಶದ ದೌರ್ಭಾಗ್ಯವಾಗಿದೆ. ಇದು ಸಲ್ಲದು. ಈ ಪರಿಕಲ್ಪನೆ ಬದಲಾಗಬೇಕು. ದೇಶಕ್ಕೆ ಅದ್ಭುತ ಸಂವಿಧಾನವನ್ನು ನೀಡುವುದರ ಮೂಲಕ ಸಮಾನತೆ ಕಲ್ಪಿಸಿದ ಕೀರ್ತಿ ಅಂಬೇಡ್ಕರ್ರಿಗೆ ಸಲ್ಲುತ್ತದೆ. ಅವರ ಆದರ್ಶ, ಚಿಂತನೆ ಇಂದಿನ ಯುವಕರಲ್ಲಿ ಮೂಡಬೇಕು ಎಂದರು.
ಈ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪದಕ ವಿಜೇತ ಕುಂದಾಪುರ ಅಗ್ನಿಶಾಮಕ ಠಾಣಾ ಸಿಬ್ಬಂದಿ ಸುಬ್ರಾಯ ಬಳೆಗಾರ್ ಹಳಗೇರಿ ಅವರನ್ನು ಶಾಸಕ ಗೋಪಾಲ ಪೂಜಾರಿ ಸನ್ಮಾನಿಸಿದರು.
ಜೇಸಿಐ ಅಧ್ಯಕ್ಷ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ಚಂದ್ರ ಹಳಗೇರಿ, ಯೋಜನಾಧಿಕಾರಿ ನರಸಿಂಹ ಹಳಗೇರಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.