ಬಂಟ್ವಾಳ : ಅಸ್ಪ್ರಶ್ಶತೆ ಸಮಾಜಕ್ಕೆ ಅಂಟಿದ ಶಾಪ ಜ್ಞಾನ ಅಸ್ಪ್ರಶ್ಶತೆಯನ್ನು ಹೊಡೆದೋಡಿಸುವ ಆಯುಧ , ಹಾಗಾಗಿ ಸರ್ವರೂ ಶಿಕ್ಷಣವನ್ನು ಪಡೆಯುವಂತಾಗಲಿ ಎಂದು ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ ನುಡಿದರು.
ಅವರು ತಾಲೂಕು ಆಡಳಿತ , ತಾಲೂಕು ಪಂಚಾಯತ್ , ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 124ನೇ ಜನ್ಮ ದಿನಾಚರಣೆಯನ್ನು ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು .
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿವಕುಮಾರ್ ಪ್ರಧಾನ ಭಾಷಣಗೈದರು. ತಾ.ಪಂ.ಅಧ್ಯಕ್ಷ ಯಶವಂತ ಡಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ , ತಾ.ಪಂ.ಸದಸ್ಯರಾದ ಮಾಧವ ಮಾವೆ , ದಿನೇಶ್ ಅಮ್ಟೂರು , ತಹಶೀಲ್ದಾರ್ ಪುರಂದರ ಹೆಗ್ಡೆ , ಮರಾಠಿ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಎಂ.ಎ.ನಾಯ್ಕ , ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಸಯನ ಕಾರಿಂಜ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ , ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಅಧಿಕಾರಿ ರೆಡ್ಡಿ ನಾಯ್ಕ ಸ್ವಾಗತಿಸಿದರು . ಶಿಕ್ಷಕ ಪ್ರಸಾದ್ ವಂದಿಸಿ , ರಂಗ ನಿರ್ದೇಶಕ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.