ನವದೆಹಲಿ: ನೆಹರೂ ಮನೆತನದ ಮತ್ತೊಂದು ಸದಸ್ಯೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡುವ ಸಾಧ್ಯತೆ ಇದೆ.
ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ಗಾಂಧಿಯನ್ನು ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಚಿಂತನೆಗಳು ನಡೆದಿವೆ ಎನ್ನಲಾಗಿದೆ.
ಚುನಾವಣೆಯಲ್ಲಿ ಶತಾಯ ಗತಾಯ ಅಧಿಕಾರದ ಗದ್ದುಗೆ ಏರಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಮಹತ್ವದ ಪಾತ್ರ ನಿಭಾಯಿಸಿದ ರಾಜಕೀಯ ತಂತ್ರಗಾರಿಕೆ ನಿಪುಣ ಎನಿಸಿಕೊಂಡಿರುವ ಪ್ರಶಾಂತ್ ಕಿಶೋರ್ ಅವರನ್ನು ತನ್ನತ್ತ ಸೆಳೆದುಕೊಂಡಿದೆ.
ಮೂಲಗಳ ಪ್ರಕಾರ ಪ್ರಶಾಂತ್ ಕಿಶೋರ್ ಅವರೇ ಪ್ರಿಯಾಂಕರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವಂತೆ ಕಾಂಗ್ರೆಸ್ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಲೋಕಸಭೆಯಲ್ಲಿ ಉತ್ತಪ್ರದೇಶದಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಮಾತ್ರ ಪಡೆದು ಹೀನಾಯ ಸೋಲು ಕಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.