ನವದೆಹಲಿ: ಎನ್ಡಿಎ ಸರ್ಕಾರವು ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧಗಳನ್ನು ಸೂಕ್ಷ್ಮವಾಗಿ ಪರಿಗಣಿಸುತ್ತಿದೆ. ಇದರ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭ ಶುಭ ಹಾರೈಸಿದ ಅವರು, ಮಹಿಳೆಯರ ವಿರುದ್ಧದ ಅಪರಾಧಗಳನ್ನು ನಿಭಾಯಿಸಲು ಕಾನೂನು ಮತ್ತು ಸಾಂಸ್ಥಿಕ ಮೂಲಸೌಕರ್ಯಗಳನ್ನು ಬಲಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಗೃಹ ಸಚಿವಾಲಯವು ರಾಷ್ಟ್ರವ್ಯಾಪಿ ತುರ್ತು ಪ್ರತಿಕ್ರಿಯೆ ವ್ಯವಸ್ಥೆ ಸ್ಥಾಪಿಸುವ ಪ್ರಕ್ರಿಯೆ ಆರಂಭಿಸಿದೆ. ’112’ ತುರ್ತು ಸೇವೆ ನಂಬರ್ ಆಗಿರಲಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.
ಮಹಿಳೆಯರನ್ನು ಬಲಪಡಿಸುವ ಮತ್ತು ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.