ನವದೆಹಲಿ: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯ ಆವರಣದಲ್ಲಿ ಸಂಭವಿಸಿದೆ.
ಏಮ್ಸ್ನ ಶವಾಗಾರದ ಬಳಿ ಕಾಮಗಾರಿ ನಡೆಸುತ್ತಿದ್ದ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಾಷ್ಟ್ರೀಯ ವಿಪತ್ತು ಪಡೆಗೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಐವರು ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದ್ದು, ಓರ್ವ ಸ್ಥಳದಲ್ಲಿ ಸಾವನ್ನಪ್ಪಿದರೆ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.