ಬೆಂಗಳೂರು : ಈ ಬಾರಿಯ ಕಾಂಗ್ರೆಸ್ ಎಐಸಿಸಿ ಮಹಾ ಅಧಿವೇಶನ ನಡೆಯಲಿದೆ. ಕಳೆದ ವರ್ಷ ಮಾರ್ಚ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಎಐಸಿಸಿ ಅಧಿವೇಶನವನ್ನು ಬೆಂಗಳೂರಿನಲ್ಲಿ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.
ಎಐಸಿಸಿ ಮಹಾ ಅಧಿವೇಶನವನ್ನು ಕರ್ನಾಟಕದಲ್ಲಿ ಹಮ್ಮಿಕೊಳ್ಳುವ ಮೂಲಕ ದಕ್ಷಿಣ ಭಾರತದಲ್ಲಿ ಪಕ್ಷ ಬಲವರ್ಧನೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹಲವು ವರ್ಷಗಳ ಬಳಿಕ ಕರ್ನಾಟಕದಲ್ಲಿ ಎಐಸಿಸಿ ಮಹಾಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲೇ ಅಧಿವೇಶನ ಆಯೋಜಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ವರಿಷ್ಠರು ತಿಳಿಸಿದ್ದು, ಈಗ ಅದಕ್ಕೆ ಅನುಮತಿ ದೊರೆತಿದೆ ಎಂದು ತಿಳಿದು ಬಂದಿದೆ.
ದೆಹಲಿ ಪ್ರವಾಸದಲ್ಲಿರುವ ಪರಮೇಶ್ವರ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾ ಪಂಚಾಯತ್ ಫಲಿತಾಂಶ, ಕೆಪಿಸಿಸಿ ಪದಾಧಿಕಾರಿ ನೇಮಕಾತಿ, ಸಿಎಂ ವಾಚ್ ವಿವಾದ, ರಾಜ್ಯದಲ್ಲಿರುವ ಕಾಂಗ್ರೆಸ್ಸಿನ ಆಸ್ತಿಯ ಬಗ್ಗೆ ಮತ್ತು ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.