ನವದೆಹಲಿ: ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ್ ಗುರೂಜಿ ಅವರು ನಡೆಸುತ್ತಿರುವ ವಿಶ್ವ ಸಾಂಸ್ಕೃತಿಕ ಉತ್ಸವ ಶುಕ್ರವಾರದಿಂದ ಆರಂಭಗೊಳ್ಳಲಿದೆ.
ಆರ್ಟ್ ಆಫ್ ಲಿವಿಂಗ್ನ 35ನೇ ಸಂಸ್ಥಾಪನಾ ವರ್ಷದ ಅಂಗವಾಗಿ ಮಾ.11-13ರವರೆಗೆ ಯಮುನಾ ನದಿ ತಟದಲ್ಲಿ ಉತ್ಸವ ನಡೆಯಲಿದೆ. ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆಯನ್ನು ಹಾಕಲಾಗಿದ್ದು, ಅದ್ಧೂರಿತನದಿಂದ ಕೂಡಿದೆ.
10 ಸಾವಿರ ಜನರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದರೂ ಆರ್ಟ್ ಆಫ್ ಲಿವಿಂಗ್ಗೆ 5 ಕೋಟಿ ರೂಪಾಯಿ ದಂಡ ವಿಧಿಸಿದೆ. ಆದರೆ ದಂಡ ಪಾವತಿ ಮಾಡುವುದಿಲ್ಲ ಎಂದು ರವಿಶಂಕರ್ ಗುರೂಜಿ ಸ್ಪಷ್ಟಪಡಿಸಿದ್ದಾರೆ.
ದಂಡ ಪಾವತಿಸಲು ವಿಫಲವಾದರೆ ಕಾನೂನು ತನ್ನ ಕಾರ್ಯ ಮಾಡಲಿದೆ ಎಂದು ನ್ಯಾಯಮಂಡಳಿ ಎಚ್ಚರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.