ಬೆಂಗಳೂರು : ರಾಜ್ಯದ ನಗರ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ಮಾಡಿದ ಅಕ್ರಮ ನಿವೇಶನಗಳನ್ನು ಸಕ್ರಮಗೊಳಿಸುವಲ್ಲಿ ಮಾರ್ಚ್ 23 ರಿಂದ ಒಂದು ವರ್ಷ ಕಾಲ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಅಲ್ಲದೇ ಒಂದುಬಾರಿ ಮಾತ್ರ ಇದ್ಕ್ಕೆ ಅರ್ಜಿಸಲ್ಲಿಸಲು ಅವಕಾಶವಿದೆ ಎಂದು ಸರಕಾರ ಹೈಕೋರ್ಟ್ಗೆ ತಿಳಿಸಿದೆ.
ಅಕ್ರಮ ಸಕ್ರಮ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು, ಅದು ಅಸಮರ್ಪಕವಾಗಿದೆ. ಅಲ್ಲದೇ ಪ್ರಸ್ತುತ ತಿದ್ದುಪಡಿಯಂತೆ, ಕೃಷಿ ಭೂಮಿಯನ್ನೂ ವಶಪಡಿಸಿಕೊಳ್ಳಲು ಇದು ಅನುಮತಿ ನೀಡುತ್ತಿದೆ ಎಂದು ಬೆಂಗಳೂರು ಪ್ರತಿಷ್ಠಾನ ಮತ್ತು ಸಿಟಿಜನ್ ಫೊರಂ ಫಾರ್ ಮಂಗಳೂರು ಡೆವೆಲಪ್ಮೆಂಟ್ ಹಾಗೂ ಇತರರು ಸಲ್ಲಿಸಿರುವ ಅರ್ಜಿಯನ್ನು ಸಲ್ಲಿಸಿದ್ದು ವಾದ ಮಂಡಿಸಲಾಗಿದೆ .
ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ ಕಾನೂನುಗಳಿಗೆ ತಿದ್ದುಪಡಿ ತರಬಾರದೆಂದೇನಿಲ್ಲ ಎಂದು ಮೌಖಿಕವಾಗಿ ಹೇಳಿದೆ. ಅಲ್ಲದೆ ಮಾರ್ಚ್ನಲ್ಲಿ ಅಕ್ರಮ ಸಕ್ರಮಕ್ಕೆ ಅವಕಾಶ ನೀಡುತ್ತಿದ್ದು 2013 ರ ಅಕ್ಟೋಬರ್ 19 ಕ್ಕೂ ಮೊದಲು ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡ ಮತ್ತು ಅಕ್ರಮ ಬಡಾವಣೆಗಳಲ್ಲಿನ ನಿವೇಶನದ ಸಕ್ರಮಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೇ ಇದಕ್ಕೆ ಹಳೆ ದರ ಮತ್ತು ಮಾರ್ಗಸೂಚಿಗಳು ಅನ್ವಯವಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.