ಭೋಪಾಲ್: ವ್ಯಾಪಮ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಬಂಧನಕ್ಕೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ಸದ್ಯಕ್ಕೆ ಅವರು ಬಂಧನ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಸ್ಪೆಶಲ್ ಟಾಸ್ಕ್ ಫೋರ್ಸ್ ಇವರ ವಿರುದ್ಧ ಎಫ್ಐಆರ್ ಹೂಡಿದ್ದು, ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದ ರಾಜ್ಯಪಾಲರು ತಾನು ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ಇಂತಹ ಎಫ್ಐಆರ್ ಸಮಂಜಸವಲ್ಲ ಎಂದು ವಾದಿಸಿದ್ದರು.
ಈ ಹಿನ್ನಲೆಯಲ್ಲಿ ಅವರ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿದೆ, ಈ ಪ್ರಕರಣದ ವಿಸ್ತೃತ ತೀರ್ಪನ್ನು ಮುಂದೆ ಪ್ರಕಟಿಸಲಿದೆ.
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನಡೆಸಿದ್ದ ಅರಣ್ಯ ಸಿಬ್ಬಂದಿ ನೇಮಕಾತಿ ಪರೀಕ್ಷೆಗೆ ರಾಜ್ಯಪಾಲರು ಐವರು ವಿದ್ಯಾರ್ಥಿಗಳನ್ನು ಶಿಫಾರಸ್ಸು ಮಾಡಿದ್ದಾರೆ ಎಂಬ ಆರೋಪವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.