ಕಾರ್ಕಳ: ಅಂಗವಿಕಲರಿಗೆ ಸರಕಾರದಿಂದ ಲಭಿಸುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ಶಿಬಿರವು ಈದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ವಿಕಲಚೇತನರ ಸಬಲೀಕರಣಾಧಿಕಾರಿ ನಿರಂಜನ್ ಭಟ್ ಮಾಹಿತಿದಾರರಾಗಿ ಭಾಗವಹಿಸಿ, ವಿಕಲಚೇತನರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಪುನರ್ವಸತಿ ಕಲ್ಪಿಸುವ ಬಗ್ಗೆ, ಅವರಿಗೆ ಮೀಸಲಿರಿಸಿದ ಅನುದಾನದ ೩ನೇ ಭಾಗವನ್ನು ಸದುಪಯೋಗ ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ ಶ್ರೀಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯ ಜಯವರ್ಮ ಜೈನ್, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಮಂಜುಳಾ, ಗ್ರಾ.ಪಂ.ಸದಸ್ಯರುಗಳು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೇ.60ಕ್ಕೂ ಅಧಿಕ ಅಂಗವಿಕಲರಿಗೆ ಪಂಚಾಯತ್ ಶೇ.3 ಅನುದಾನದಲ್ಲಿ ಸೋಲಾರ್ ದೀಪ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.