ಡೆಹ್ರಾಡೂನ್: ಬಂಡಾಯವೆದ್ದ ಉತ್ತರಾಖಂಡ ಕಾಂಗ್ರೆಸ್ ನಾಯಕರ ವಿರುದ್ಧ ಛಾಟಿ ಬೀಸಲು ಪಕ್ಷ ಮುಂದಾಗಿದ್ದು, ಸರ್ಕಾರವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ.
ಸೋಮವಾರ ಮಾಜಿ ಸಿಎಂ ವಿಜಯ್ ಬಹುಗುಣ್ ಅವರ ಪುತ್ರ ಸಕೇತ್ ಮತ್ತು ಅನಿಲ್ ಗುಪ್ತಾ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ.
ಈ ಮೊದಲು ಕಾಂಗ್ರೆಸ್ ರಾಜ್ಯದಲ್ಲಿನ ತನ್ನ 5 ಜಿಲ್ಲಾ ಘಟಕಗಳನ್ನು ವಿಸರ್ಜನೆಗೊಳಿಸಿತ್ತು.
೩೫ ಬಿಜೆಪಿ ಶಾಸಕರು ಮತ್ತು 9 ಬಂಡಾಯ ಕಾಂಗ್ರೆಸ್ ನಾಯಕರು ದೆಹಲಿಗೆ ಆಗಮಿಸಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಭೇಟಿಯಾಗಿ, ಉತ್ತರಾಖಂಡ ಸರ್ಕಾರವನ್ನು ವಿಸರ್ಜಿಸುವಂತೆ ಮನವಿ ಮಾಡಿಕೊಂಡ ಬಳಿಕ ಈ ಎಲ್ಲಾ ಬೆಳವಣಿಗೆಗಳು ನಡೆದಿವೆ.
ಇನ್ನೊಂದೆಡೆ ಸಿಎಂ ಹರೀಶ್ ರಾವತ್ ಅವರು ದೆಹಲಿಗೆ ಆಗಮಿಸಿ ಪ್ರಸ್ತುತ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಹೈಕಮಾಂಡ್ನ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.