ಇಸ್ಲಾಮಾಬಾದ್: ಪಾಕಿಸ್ಥಾನ ಸೋಮವಾರ ರಾಜಧಾನಿ ಇಸ್ಲಾಮಾಬಾದ್ ಹಾಗೂ ರಾವಲ್ಪಿಂಡಿಗಳಲ್ಲಿ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಪಾಕಿಸ್ಥಾನ ದಿನ ಆಚರಣೆ ಹಾಗೂ ಪೂರ್ವಭಾವಿ ಅಭ್ಯಾಸ ಸಂದರ್ಭ ಉಗ್ರರ ದಾಳಿ ಹಿಮ್ಮಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಕಿಸ್ಥಾನದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಮಾ.೨೩ರ ಬುಧವಾರದಂದು ಪಾಕಿಸ್ಥಾನ ಸಶಸ್ತ್ರ ಪಡೆಯ ಪೆರೇಡ್ ನಡೆಯಲಿದೆ. ಪ್ರಮುಖ ಶಸ್ತ್ರಾಸ್ತ್ರಗಳ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಈ ವೇಳೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.