ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಮತದಾರರನ್ನು ತಲುಪಲು ಸಾಂಸ್ಕೃತಿಕ ಜಾಲತಾಣ ಸೈಟ್ ’ಲೈವ್ ಚಾಟ್’ ಬಳಸಿದ್ದಾರೆ. ಈ ಮುಲಕ ಮತದಾರರೊಂದಿಗೆ ವ್ಯವಹರಿಸಲು ಲೈವ್ ಚಾಟ್ ನೇರ ಪ್ರಸಾರ ವೇದಿಕೆ ಬಳಸಿದ ದೇಶದ ಮೊದಲ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.
ಸೋಮವಾರ ರಾತ್ರಿ 9ಗಂಟೆಯಿಂದ 30 ನಿಮಿಷಗಳ ಕಾಲ ಜನರೊಂದಿಗೆ ಸಂವಹನ ನಡೆಸಿದ ಅವರು, ವಿವಿಧ ವಿಚಾರಗಳ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಿದರು. ಉತ್ತರ ಕೇರಳದ ಕಣ್ಣೂರಿನಲ್ಲಿ ಮುಂದಿನ ನವೆಂಬರ್ ತಿಂಗಳಿನಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭಗೊಳ್ಳಲಿದೆ ಎಂದು ಈ ವೇಳೆ ಚಾಂಡಿ ಹೇಳಿದ್ದಾರೆ.
ಆನರೊಂದಿಗೆ ಸಂವಹನ, ಚರ್ಚೆ, ವಿಚಾರ ವಿನಿಮಯ ನಡಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಇದೇ ವೇಳೆ ಅವರು ರಾಜ್ಯದಲ್ಲಿ ಮದ್ಯ ನಿಷೇಧವನ್ನು ಜನರು ಸಂಪೂರ್ಣವಾಗಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಜನರ ಸಮಸ್ಯೆಗಳಿಗೆ ಸ್ಪಂದಿಸಲು ನಡೆಸಿದ ಸಾಮೂಹಿಕ ಸಂಪರ್ಕ ಕಾರ್ಯಕ್ರಮಕ್ಕಾಗಿ ಚಾಂಡಿ ಅವರು 2013ರಲ್ಲಿ ಯುಎನ್ ಸಾಮಾಜಿಕ ಸೇವೆ ಪ್ರಶಸ್ತಿ ಪಡೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.