ಹೈದರಾಬಾದ್; ದಲಿತ ಸಂಶೋಧಕ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣ ಮತ್ತೆ ಗರಿಗೆದರಿದೆ. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಅಪ್ಪಾ ರಾವ್ ಅವರ ನಿವಾಸ ಮತ್ತು ಕಛೇರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ರೋಹಿತ್ ಪ್ರಕರಣದ ಬಳಿಕ ಅಪ್ಪಾ ರಾವ್ ಅವರು ರಜೆಯ ಮೇಲೆ ತೆರಳಿದ್ದರು, ಇದೀಗ ಅವರು ಮತ್ತೆ ಅಧಿಕಾರಕ್ಕೆ ವಾಪಾಸ್ಸಾಗಿದ್ದಾರೆ. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಅಪ್ಪಾ ರಾವ್ ಕಛೇರಿ, ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ 25 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಯೂನಿವರ್ಸಿಟಿಯ ಆಡಳಿತ ಹೆಚ್ಚಿನ ಪೊಲೀಸ್ ಪಡೆಗಾಗಿ ಮನವಿ ಮಾಡಿಕೊಂಡಿದೆ.
ವಿಶ್ವವಿದ್ಯಾಲಯದ ಗೇಟ್ಗಳನ್ನು ಮಾಧ್ಯಮಗಳು, ರಾಜಕಾರಣಿಗಳು, ಇತರ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಬರದಂತೆ ಮುಚ್ಚಲಾಗಿದೆ. ಮಾ.೨೭ರವರೆಗೆ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.
ಇನ್ನೊಂದೆಡೆ ಜೆಎನ್ಯುನ ದೇಶದ್ರೋಹಿ ಆರೋಪದಲ್ಲಿ ಸಿಲುಕಿರುವ ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಹೈದರಾಬಾದ್ ವಿಶ್ವವಿದ್ಯಾಲಯಕ್ಕೆ ಬರುವವನಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.